ಶನಿವಾರ, 10 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರೋತ್ಸವ: ವಿರಾಗಿ, ಕೋಳಿ ಎಸ್ರು ಸೇರಿ 5 ಕನ್ನಡ ಚಿತ್ರಗಳಿಗೆ ಪ್ರಶಸ್ತಿ

Last Updated 31 ಮಾರ್ಚ್ 2023, 6:51 IST
ಅಕ್ಷರ ಗಾತ್ರ

ಬೆಂಗಳೂರು: 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಗುರುವಾರ ಮುಕ್ತಾಯಗೊಂಡಿದ್ದು, ವಿರಾಟಪುರ ವಿರಾಗಿ, ಕೋಳಿ ಎಸ್ರು ಸಹಿತ ಕನ್ನಡದ ಐದು ಚಿತ್ರಗಳು ಪ್ರಶಸ್ತಿಗೆ ಭಾಜನವಾಗಿವೆ.

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು.

ಏಷ್ಯನ್ ವಿಭಾಗದಲ್ಲಿ ‘ವಿರಾಟಪುರ ವಿರಾಗಿ’(ನಿರ್ದೇಶಕ ಬಿ.ಎಸ್.ಲಿಂಗದೇವರು) ಮೂರನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದು ಕೊಂಡಿದ್ದು, ಚಿತ್ರಭಾರತಿ ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ‘ಕೋಳಿ ಎಸ್ರು’(ನಿರ್ದೇಶಕಿ ಚಂಪಾ ಶೆಟ್ಟಿ) ಅತ್ಯುತ್ತಮ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಚಿತ್ರವಾಗಿ ‘ನಾನು ಕುಸುಮ’(ನಿರ್ದೇಶಕ ಕೃಷ್ಣೇಗೌಡ) ಪ್ರಶಸ್ತಿ ಗಳಿಸಿದರೆ, ‘ಹದಿನೇಳೆಂಟು’ (ಪೃಥ್ವಿ ಕೊಣನೂರು) ದ್ವಿತೀಯ ಹಾಗೂ ‘ಫೋಟೋ’ (ಉತ್ಸವ್ ಗೋನಾವರ್) ತೃತೀಯ ಸ್ಥಾನವನ್ನು ಪಡೆದುಕೊಂಡಿವೆ.

ಸಮಾರಂಭದಲ್ಲಿ ಪೋಷಕ ನಟ ದೊಡ್ಡಣ್ಣ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್‌.ಹರ್ಷ, ನಿರ್ದೇಶಕರಾದ ಡಿ.ಪಿ.ಮುರಳಿಧರ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ನರಹರಿ ರಾವ್‌ ವೇದಿಕೆಯಲ್ಲಿದ್ದು ಪ್ರಶಸ್ತಿ ವಿತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT