ಬೆಂಗಳೂರು: 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಗುರುವಾರ ಮುಕ್ತಾಯಗೊಂಡಿದ್ದು, ವಿರಾಟಪುರ ವಿರಾಗಿ, ಕೋಳಿ ಎಸ್ರು ಸಹಿತ ಕನ್ನಡದ ಐದು ಚಿತ್ರಗಳು ಪ್ರಶಸ್ತಿಗೆ ಭಾಜನವಾಗಿವೆ.

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ವಿಧಾನಸೌಧದ ಬಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು.

ಏಷ್ಯನ್ ವಿಭಾಗದಲ್ಲಿ ‘ವಿರಾಟಪುರ ವಿರಾಗಿ’(ನಿರ್ದೇಶಕ ಬಿ.ಎಸ್.ಲಿಂಗದೇವರು) ಮೂರನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಪಡೆದು ಕೊಂಡಿದ್ದು, ಚಿತ್ರಭಾರತಿ ಭಾರತೀಯ ಸಿನಿಮಾ ಸ್ಪರ್ಧಾ ವಿಭಾಗದಲ್ಲಿ ‘ಕೋಳಿ ಎಸ್ರು’(ನಿರ್ದೇಶಕಿ ಚಂಪಾ ಶೆಟ್ಟಿ) ಅತ್ಯುತ್ತಮ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಚಿತ್ರವಾಗಿ ‘ನಾನು ಕುಸುಮ’(ನಿರ್ದೇಶಕ ಕೃಷ್ಣೇಗೌಡ) ಪ್ರಶಸ್ತಿ ಗಳಿಸಿದರೆ, ‘ಹದಿನೇಳೆಂಟು’ (ಪೃಥ್ವಿ ಕೊಣನೂರು) ದ್ವಿತೀಯ ಹಾಗೂ ‘ಫೋಟೋ’ (ಉತ್ಸವ್ ಗೋನಾವರ್) ತೃತೀಯ ಸ್ಥಾನವನ್ನು ಪಡೆದುಕೊಂಡಿವೆ.

ಸಮಾರಂಭದಲ್ಲಿ ಪೋಷಕ ನಟ ದೊಡ್ಡಣ್ಣ ಅವರಿಗೆ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಯಿತು. ವಾರ್ತಾ ಇಲಾಖೆಯ ಆಯುಕ್ತ ಡಾ.ಪಿ.ಎಸ್.ಹರ್ಷ, ನಿರ್ದೇಶಕರಾದ ಡಿ.ಪಿ.ಮುರಳಿಧರ, ಚಿತ್ರೋತ್ಸವದ ಕಲಾತ್ಮಕ ನಿರ್ದೇಶಕ ನರಹರಿ ರಾವ್ ವೇದಿಕೆಯಲ್ಲಿದ್ದು ಪ್ರಶಸ್ತಿ ವಿತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.