ಶನಿವಾರ, ಜನವರಿ 28, 2023
24 °C

ಮೊದಲ ನೋಟದಲ್ಲಿ ‘ವಿರಾಟಪುರದ ವಿರಾಗಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆಧುನಿಕ ಬಸವಣ್ಣ ಎಂದೇ ಖ್ಯಾತರಾಗಿರುವ ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ‘ವಿರಾಟಪುರ ವಿರಾಗಿ’ ಚಿತ್ರದ ಮೊದಲ ನೋಟ (ಫಸ್ಟ್‌ ಲುಕ್‌) ಇತ್ತೀಚಿಗೆ ಬಿಡುಗಡೆಯಾಯಿತು.

ಬಿ.ಎಸ್ ಲಿಂಗದೇವರು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ‌.‌ ‘ಸಮಾಧಾನ’ ತಂಡ ಈ ಚಿತ್ರವನ್ನು ನಿರ್ಮಾಣ ಮಾಡಿದೆ.

ಕುಮಾರ ಶಿವಯೋಗಿ ಪಾತ್ರದಲ್ಲಿ ಸುಚೇಂದ್ರ ಪ್ರಸಾದ್ ಆಭಿನಯಿಸಿದ್ದಾರೆ. ಶಿಕ್ಷಣ, ಆರೋಗ್ಯ ಹಾಗೂ ಮಹಿಳಾ ಸಬಲೀಕರಣ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳ ಹರಿಕಾರರಾದ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರಕ್ಕೆ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ, ಅಶೋಕ್ ವಿ. ರಾಮನ್ ಛಾಯಾಗ್ರಹಣ ಹಾಗೂ ಗುಣಶೇಖರನ್ ಸಂಕಲನವಿದೆ ಎಂದರು ನಿರ್ದೇಶಕ ಲಿಂಗದೇವರು.

ಹಾನಗಲ್ ಕುಮಾರ ಶಿವಯೋಗಿಗಳ ಜೀವನಾಧಾರಿತ ಈ ಚಿತ್ರವನ್ನು ಪ್ರತಿಯೊಬ್ಬರೂ ನೋಡಬೇಕು. ಲಿಂಗ ದೇವರು ನಿರ್ದೇಶನದ ಈ ಚಿತ್ರ ಜನವರಿ 12ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ರಾಜ್ಯದ ಐದು ಕಡೆಗಳಿಂದ ರಥಯಾತ್ರೆ ನಡೆಯಲಿದೆ ಎಂದು ಜಡೆ ಅಮರೇಶ್ವರ ಶ್ರೀಗಳು ತಿಳಿಸಿದರು.

ಫಸ್ಟ್‌ಲುಕ್‌ ಬಿಡುಗಡೆ ಕಾರ್ಯಕ್ರಮದಲ್ಲಿ ಜಡೆಯ ಶಾಂತಲಿಂಗೇಶ್ವರ ಸ್ವಾಮೀಜಿ, ಹಾವೇರಿಯ ಸದಾಶಿವ ಸ್ವಾಮೀಜಿ, ಸಂಗಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಘನಬಸವ ಅಮರೇಶ್ವರ ಸ್ವಾಮೀಜಿ, ಕರ್ನಾಟಕ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ, ನಿರ್ದೇಶಕ ಗಿರೀಶ್ ಕಾಸರವಳ್ಳಿ, ಮಾಜಿ ಸಚಿವ, ಅಲ್ಲಮ ವೀರಭದ್ರಪ್ಪ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.