ಗುರುವಾರ , ಆಗಸ್ಟ್ 5, 2021
21 °C

ತಮಿಳು ನಟ ವಿಶಾಲ್‌ಗೆ ಮಹಿಳೆಯಿಂದ ₹ 45 ಲಕ್ಷ ವಂಚನೆ: ಪ್ರಕರಣ ದಾಖಲು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಚೆನ್ನೈ‌: ತಮಿಳು ಚಿತ್ರರಂಗದ ಅತ್ಯಂತ ಜನಪ್ರಿಯ ನಾಯಕರಲ್ಲಿ ಒಬ್ಬರಾಗಿರುವ ವಿಶಾಲ್‌ ಅವರಿಗೆ ಮಹಿಳೆಯೊಬ್ಬರು
ಹಣ ಪಡೆದು ವಂಚಿಸಿರುವ ಘಟನೆ ವರದಿಯಾಗಿದೆ.

ವಿಶಾಲ್ ಹೀರೋ ಮಾತ್ರವಲ್ಲ, ನಿರ್ಮಾಪಕರೂ ಹೌದು. ವಿಶಾಲ್ ಕಳೆದ ಏಳು ವರ್ಷಗಳಿಂದ ಎಂಟು ಚಿತ್ರಗಳನ್ನು ನಿರ್ಮಾಣ
ಮಾಡಿದ್ದು, ವಿಶಾಲ್ ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ನಲ್ಲಿ ಹಲವು ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ. ಸದ್ಯ ವಿಶಾಲ್ ಚಕ್ರ ಈ
ಚಿತ್ರದಲ್ಲಿ ನಟಿಸುತ್ತಿದ್ದು, ಇದರ ಟೀಸರ್ ಬಿಡುಗಡೆಯಾಗಿದೆ. ಇದು ಅಭಿಮಾನಿಗಳಿಗೆ ಖುಷಿ ತಂದಿದೆ.

ವಿಶಾಲ್ ಅವರ ಸಿನಿಮಾ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಕಳೆದ ಆರು ವರ್ಷಗಳಲ್ಲಿ 45 ಲಕ್ಷ
ರೂಪಾಯಿಗೂ ಹೆಚ್ಚು ಹಣ ಪಡೆದು ವಂಚಿಸಿದ್ದಾರೆ.  ಈ ಬಗ್ಗೆ ವಿಶಾಲ್‌ ಅವರ ಮ್ಯಾನೇಜರ್ ಹರಿ ಕುಮಾರ್‌ ಪೊಲೀಸರಿಗೆ  
ದೂರು ನೀಡಿದ್ದಾರೆ.

ಸದ್ಯ ಪೊಲೀಸರು ಆ ಮಹಿಳೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು