ಸೋಮವಾರ, ಅಕ್ಟೋಬರ್ 18, 2021
25 °C

ವಿಷ್ಣುವರ್ಧನ್‌ ಜನ್ಮದಿನ: ’ಹೃದಯವಂತ’ನ ಸ್ಮರಿಸಿದ ಅಭಿಮಾನಿಗಳು, ಸಿನಿಮಾ ತಾರೆಯರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಹಸ ಸಿಂಹ, ಹೃದಯವಂತ ದಿವಂಗತ ವಿಷ್ಣುವರ್ಧನ್ ಅವರ 71ನೇ ಜನ್ಮದಿನವನ್ನು ಇಂದು (ಸೆ.18) ಆಚರಿಸಲಾಗುತ್ತಿದೆ.

ಅನ್ನದಾನ, ಆಸ್ಪತ್ರೆಗಳಲ್ಲಿ ಹಣ್ಣು ವಿತರಣೆ, ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ವಿಷ್ಣು ಹುಟ್ಟುಹಬ್ಬವನ್ನು ಅವರ ಅಭಿಮಾನಿಗಳು ಅರ್ಥಪೂರ್ಣವಾಗಿ ಆಚರಿಸುತ್ತಿದ್ದಾರೆ.

ಚಂದನವನದ ತಾರೆಯರು, ಅಭಿಮಾನಿಗಳು ಹಾಗೂ ರಾಜಕೀಯ ನಾಯಕರು, ಸಂಘ ಸಂಸ್ಥೆಗಳ ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ’ದಾದಾ’ನನ್ನು ಸ್ಮರಿಸಿದ್ದಾರೆ

ಕಿಚ್ಚ ಸುದೀಪ್ ಅವರು ವಿಷ್ಣುವರ್ಧನ್ ಭಾವಚಿತ್ರಕ್ಕೆ ನಮಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದು ’ವಿಷ್ಣುವರ್ಧನ್ ಅವರಿಗೆ ಅಭಿಮಾನಿಗಳ ಸಾಗರವೇ ಇದೆ. ಆ ಸಾಗರದಲ್ಲಿ ನಾನು ಒಂದು ಹನಿ. ನೀವು ಪ್ರತಿ ಕ್ಷಣ ಪ್ರತಿ ದಿನ ನೆನಪಾಗುತ್ತೀರಿ ವಿಷ್ಣು ಸರ್’ ಎಂದು ಟ್ವೀಟ್ ಮಾಡಿದ್ದಾರೆ.

ವಿಷ್ಣುವರ್ದನ್ ಜತೆ ಇರುವ ಫೋಟೊವನ್ನು ಶೇರ್ ಮಾಡಿರುವ ನಟ ರಮೇಶ್‌ ಅರವಿಂದ್‌ "ಸ್ನೇಹದ ಕಡಲಲ್ಲಿ....ನೆನಪಿನ ದೋಣಿಯಲಿ..." ಎಂದು ಬರೆದುಕೊಂಡಿದ್ದಾರೆ.

ಅಭಿನಯ ಭಾರ್ಗವ ವಿಷ್ಣುವರ್ಧನ್ ಅವರನ್ನು ಅಭಿಮಾನಿಗಳ ಪ್ರೀತಿಯಿಂದ ವಿಷ್ಣುದಾದಾ ಎಂದೇ ಕರೆಯುತ್ತಾರೆ. ಅವರು ಭೌತಿಕವಾಗಿ ಇಲ್ಲದಿದ್ದರೂ ಸಿನಿಮಾಗಳ ಮೂಲಕ ಜೀವಂತವಾಗಿದ್ದಾರೆ. 200 ಸಿನಿಮಾಗಳಲ್ಲಿ ನಟಿಸಿರುವ ವಿಷ್ಣು ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. 

ರಾಜ್ಯದ ಎಲ್ಲ ಕಡೆ ಅವರ ಅಭಿಮಾನಿಗಳು ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು