ಬೆಂಗಳೂರು: ಅಭಿಮಾನ್ ಸ್ಟುಡಿಯೊದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವು ಮಾಡಿರುವ ಕ್ರಮವನ್ನು ನಟ ರಿಷಬ್ ಶೆಟ್ಟಿ ಖಂಡಿಸಿದ್ದಾರೆ.

ಡಾ. ವಿಷ್ಣುವರ್ಧನ್ ಸರ್ ಅವರ ಸ್ಮಾರಕದ ವಿಚಾರದಲ್ಲಿ ನಡೆದಿರುವ ಬೆಳವಣಿಗೆ ಖಂಡನೀಯ. ಅವರನ್ನು ಹೃದಯಪೂರ್ವಕವಾಗಿ ಆರಾಧಿಸುವ ಪ್ರತಿಯೊಬ್ಬ ಅಭಿಮಾನಿಗೂ ಇದು ಅತೀವ ನೋವುಂಟು ಮಾಡಿದೆ. ನಾಡಿನ ಮೇರು ನಟರೊಬ್ಬರ ವಿಚಾರದಲ್ಲಿ ಇಂತಹ ಘಟನೆಗಳು ಪದೇ ಪದೇ ನಡೆಯುತ್ತಿರುವುದು ಅವರ ವ್ಯಕ್ತಿತ್ವ ಮತ್ತು ಕಲಾಸೇವೆಗೆ ಅಗೌರವ ತಂದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಕಳೆದ ಶುಕ್ರವಾರ ಮಧ್ಯಾಹ್ನ ಅಭಿಮಾನ್ ಸ್ಟುಡಿಯೊದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವು ಮಾಡಿರುವ ಕ್ರಮವನ್ನು ಖಂಡಿಸಿ ವಿಷ್ಣುವರ್ಧನ್ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ಬಿಡುಗಡೆ ಮಾಡಿದರು. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗಿದೆ.

ಅಭಿಮಾನ್ ಸ್ಟುಡಿಯೊದಲ್ಲಿದ್ದ ವಿಷ್ಣುವರ್ಧನ್ ಅವರ ಸಮಾಧಿಯನ್ನು ತೆರವು ಮಾಡಿರುವ ಕ್ರಮಕ್ಕೆ ನಟ ಸುದೀಪ್, ಧ್ರುವ ಸರ್ಜಾ ಸೇರಿದಂತೆ ಅನೇಕರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ವಿಷ್ಣುವರ್ಧನ್ ಅವರ ಅಂತ್ಯಸಂಸ್ಕಾರವನ್ನು 2009ರಲ್ಲಿ ಅಭಿಮಾನ್ ಸ್ಟುಡಿಯೊದಲ್ಲಿ ನೆರವೇರಿಸಲಾಗಿತ್ತು. ಬಾಲಣ್ಣ ಅವರ ಕುಟುಂಬದವರು ಕೋರ್ಟ್ ಮೊರೆ ಹೋಗಿದ್ದರಿಂದ ಕೋರ್ಟ್ ಆದೇಶದ ಮೇರೆಗೆ ಸಮಾಧಿ ತೆರವು ಮಾಡಲಾಗಿದೆ.
.ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿ ರಕ್ಷಣೆಗೆ JDS ಆಗ್ರಹ.ವಿಷ್ಣುವರ್ಧನ್ ಸಮಾಧಿ ತೆರವು: ಅಭಿಮಾನ್ ಸ್ಟುಡಿಯೊ ಎದುರು ಅಭಿಮಾನಿಗಳ ಕಣ್ಣೀರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.