ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತಿನಮನೆಯಲ್ಲಿ ‘ಕಸ್ತೂರಿ ಮಹಲ್’

Last Updated 15 ಡಿಸೆಂಬರ್ 2020, 5:42 IST
ಅಕ್ಷರ ಗಾತ್ರ

ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನೀಡಿರುವ ದಿನೇಶ್ ಬಾಬು ಅವರ ನಿರ್ದೇಶನದ ‘ಕಸ್ತೂರಿ ಮಹಲ್’ ಚಿತ್ರಕ್ಕೆ ಬಾಲಾಜಿ ಡಿಜಿಟಲ್ ಸ್ಟುಡಿಯೊದಲ್ಲಿ ಮಾತಿನ‌ ಜೋಡಣೆ ನಡೆಯುತ್ತಿದೆ.

ಚಿತ್ರೀಕರಣ ಹಾಗೂ ಸಂಕಲನ ಮುಕ್ತಾಯವಾಗಿದ್ದು, ಸದ್ಯದಲ್ಲೇ ಪ್ರಥಮ ಪ್ರತಿ ಸಿದ್ದವಾಗಲಿದೆ. ಪ್ರಾಕೃತಿಕ ಸೌಂದರ್ಯದ ಕೊಟ್ಟಿಗೆಹಾರ, ಬಾಲೂರು ಸುತ್ತಮುತ್ತಲಿನ ಸುಂದರ ಪರಿಸರದಲ್ಲಿ ಚಿತ್ರೀಕರಣ ನಡೆದಿದೆ.

ಬಹುಭಾಷ ನಟಿ ಶಾನ್ವಿ ಶ್ರೀವಾಸ್ತವ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಸ್ಕಂದ ಅಶೋಕ್, ರಂಗಾಯಣ ರಘು, ಶೃತಿ ಪ್ರಕಾಶ್, ಕಾಶಿಮ ರಫಿ, ನೀನಾಸಂ ಅಶ್ವಥ್ , ಅಕ್ಷರ್ ಮುಂತಾದವರು ನಟಿಸಿದ್ದಾರೆ.

ಹಾರರ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ದಿನೇಶ್ ಬಾಬು ಅವರೆ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಇದು ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ 50ನೇ ಚಿತ್ರ.

ಶ್ರೀಭವಾನಿ‌ ಆರ್ಟ್ಸ್ ಲಾಂಛನದಲ್ಲಿ ರವೀಶ್ ಆರ್. ಸಿ ನಿರ್ಮಿಸಿರುವ ಈ ಚಿತ್ರಕ್ಕೆ ನವೀನ್ ಆರ್. ಸಿ ಹಾಗೂ
ಅಕ್ಷಯ್ ಸಿ.ಎಸ್. ಅವರ ಸಹ ನಿರ್ಮಾಣವಿದೆ. ಪಿ.ಕೆ.ಎಚ್‌. ದಾಸ್ ಛಾಯಾಗ್ರಹಣ ಹಾಗೂ ಹರೀಶ್ ಕೃಷ್ಣ ಅವರ ಸಂಕಲನ ಕಸ್ತೂರಿ ಮಹಲ್‌ಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT