ಶನಿವಾರ, ಅಕ್ಟೋಬರ್ 24, 2020
18 °C

ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅಗಲಿಕೆಗೆ ಗಣ್ಯರ ಕಂಬನಿ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಖ್ಯಾತ ಗಾಯಕ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್, ಮಾಜಿ ಕ್ರಿಕೆಟಿಗ ವಿವಿಎಸ್‌ ಲಕ್ಷ್ಮಣ್ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: 

'ಎಸ್‌.ಪಿ.ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆಯಿಂದ ಸಾಂಸ್ಕೃತಿಕ ಜಗತ್ತು ಬಡವಾಗಿದೆ. ಭಾರತದಾದ್ಯಂತ ಮನೆ ಮಾತಾಗಿದ್ದವರು, ಹಲವು ದಶಕಗಳಿಂದ ಅವರ ಮಧುರ ಧ್ವನಿ ಮತ್ತು ಸಂಗೀತ ಕೇಳುಗರನ್ನು ಆನಂದ ಪಡಿಸಿದೆ....' ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿ ಟ್ವೀಟಿಸಿದ್ದಾರೆ.

'ಭಾರತದ ಸಂಗೀತ ಅದರ ಅತ್ಯಂತ ಮಧುರವಾದ ಧ್ವನಿಯನ್ನು ಕಳೆದು ಕೊಂಡಿದೆ. 'ಪಾಡುಂ ನೀಲ' ಅಥವಾ 'ಹಾಡುವ ಚಂದ್ರ' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದರು. ಪದ್ಮಭೂಷಣ ಹಾಗೂ ಹಲವು ರಾಷ್ಟ್ರ ಪ್ರಶಸ್ತಿಗಳ ಗೌರವ ಅವರಿಗೆ ಸಂದಿವೆ...' ಎಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಿಕೊಳ್ಳಲಾಗಿದೆ.  

‘ಸಂಗೀತ ದಂತಕತೆ ಎಸ್‌.ಪಿ.ಬಾಲಸುಬ್ರಹ್ಮಣ್ಯಂ ನಿಧನದಿಂದ ಆಘಾತವಾಗಿದೆ. ಅವರ ಅಗಲುವಿಕೆಯಿಂದ ಸಂಗೀತ ಜಗತ್ತಿನಲ್ಲಿ ಸೃಷ್ಟಿಯಾಗಿರುವ ನಿರ್ವಾತ ತುಂಬಲು ಅಸಾಧ್ಯ’ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಟ್ವೀಟ್ ಮಾಡಿದ್ದಾರೆ.

‘ಎಸ್‌.ಪಿ.ಬಾಲಸುಬ್ರಹ್ಮಣ್ಯಂ ನಿಧನದಿಂದ ಬಹಳ ನೋವಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಂಗೀತದ ಉತ್ತುಂಗ ತಲುಪುವುದು ಒಂದು ಅದ್ಭುತ ಸಾಧನೆ. ಅವರ ಅಗಲುವಿಕೆ ನಮ್ಮ ದೇಶಕ್ಕೆ, ಅದರಲ್ಲೂ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟ’ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

‘ಎಲ್ಲವೂ ನಾಶವಾಯಿತು’ ಎಂದು ಸಂಗೀತ ನಿರ್ದೇಶಕ ಎ.ಆರ್‌. ರೆಹಮಾನ್ ಟ್ವೀಟ್ ಮಾಡಿದ್ದಾರೆ.

‘ಎಸ್‌.ಪಿ.ಬಾಲಸುಬ್ರಹ್ಮಣ್ಯಂ ನಿಧನದಿಂದ ಅತೀವ ದುಃಖವಾಗಿದೆ. ಅವರ ಧ್ವನಿ ಎಂದೆಂದಿಗೂ ನಮ್ಮ ಹೃದಯದಲ್ಲಿ ಉಳಿಯಲಿದೆ’ ಎಂದು ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು