ಕಿರುತೆರೆ ನಟ ವಿಕಾಶ್ ಉತ್ತಯ್ಯ ಹಾಗೂ ರಾಧಾ ಭಗವತಿ ಜೋಡಿಯಾಗಿ ನಟಿಸಿರುವ ‘ಅಪಾಯವಿದೆ ಎಚ್ಚರಿಕೆ’ ಚಿತ್ರದ ‘ಬ್ಯಾಚುಲರ್ಸ್ ಬದುಕು’ ಹಾಡು ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಟರಾದ ತಿಲಕ್, ರಾಕೇಶ್ ಅಡಿಗ, ನವೀನ್ ಶಂಕರ್ ಹಾಗೂ ವಿಕ್ಕಿ ವರುಣ್ ಹಾಡು ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ಅಭಿಜಿತ್ ತೀರ್ಥಹಳ್ಳಿ ಚಿತ್ರದ ನಿರ್ದೇಶಕ. ‘ಹತ್ತು ವರ್ಷಗಳಿಂದ ಕನ್ನಡ ಚಿತ್ರರಂಗದ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ನನಗೆ ಇದು ಮೊದಲ ನಿರ್ದೇಶನದ ಚಿತ್ರ. ಸಸ್ಪೆನ್ಸ್, ಥ್ರಿಲ್ಲರ್ ಚಿತ್ರವಾದರೂ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳುಳ್ಳ ಚಿತ್ರ. ನಾನು ಕೂಡ ಊರಿನಿಂದ ಬೆಂಗಳೂರಿಗೆ ಬಂದು ಬ್ಯಾಚುಲರ್ ಜೀವನ ಕಳೆದವನು. ಆ ಅನುಭವಗಳೇ ಈ ಹಾಡು ಬರೆಯಲು ಸ್ಫೂರ್ತಿ’ ಎಂದರು ನಿರ್ದೇಶಕ ಹಾಗೂ ಗೀತರಚನೆಕಾರ ಅಭಿಜಿತ್ ತೀರ್ಥಹಳ್ಳಿ.

ಸುನಾದ್ ಗೌತಮ್ ಸಂಗೀತ ನಿರ್ದೇಶನ ಹಾಗೂ ಛಾಯಾಚಿತ್ರಗ್ರಹಣ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.