ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜೀವನದಲ್ಲಿ ಎಂದೂ ಲೈಂಗಿಕ ಚಿತ್ರಗಳ ನಿರ್ಮಾಣ, ಹಂಚಿಕೆ ಮಾಡಿಲ್ಲ: ರಾಜ್ ಕುಂದ್ರಾ

ಫಾಲೋ ಮಾಡಿ
Comments

ಮುಂಬೈ: ಅಶ್ಲೀಲ ಚಿತ್ರ ನಿರ್ಮಾಣ ಮತ್ತು ಹಂಚಿಕೆ ಆರೋಪದಲ್ಲಿ ಬಂಧನಕ್ಕೀಡಾಗಿದ್ದ ಉದ್ಯಮಿ ರಾಜ್ ಕುಂದ್ರಾ ಅವರು, ನನ್ನ ಜೀವನದಲ್ಲಿ ಎಂದೂ ಲೈಂಗಿಕ ಚಿತ್ರಗಳ ನಿರ್ಮಾಣ ಮತ್ತು ಹಂಚಿಕೆಯಲ್ಲಿ ತೊಡಗಿಲ್ಲ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿಯ ಪತಿ ಕುಂದ್ರಾ, ವಿನಾ ಕಾರಣ ನನ್ನನ್ನು ಟಾರ್ಗೆಟ್ ಮಾಡಲಾಗಿದೆ ಎಂದಿದ್ದಾರೆ. ಈಗಾಗಲೇ ಮಾಧ್ಯಮಗಳ ವಿಚಾರಣೆಯಲ್ಲಿ ನನ್ನನ್ನು ತಪ್ಪಿತಸ್ಥ’ ಎಂದು ಘೋಷಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲೈಂಗಿಕ ವಿಷಯಕ್ಕೆ ಸಂಬಂಧಿಸಿದ ಚಿತ್ರಗಳನ್ನು ಹಂಚಿಕೆ ಮಾಡಿದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಅವರನ್ನು ಬಂಧಿಸದಂತೆ ಕಳೆದ ವಾರ ಸುಪ್ರೀಂ ಕೋರ್ಟ್ ರಕ್ಷಣೆ ಒದಗಿಸಿತ್ತು. ಕಳೆದ ಜುಲೈನಲ್ಲಿ ಅಶ್ಲೀಲ ಸಿನಿಮಾಗಳನ್ನು ಆ್ಯಪ್ ಮೂಲಕ ಹಂಚಿಕೆ ಮಾಡಿದ್ದ ಆರೋಪದಡಿ ಮತ್ತೊಂದು ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಸೆಪ್ಟೆಂಬರ್‌ನಲ್ಲಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

‘ನನ್ನ ವಿರುದ್ಧ ಹಲವು ದಾರಿ ತಪ್ಪಿಸುವ ಮತ್ತು ಬೇಜವಾಬ್ದಾರಿಯಿಂದ ಕೂಡಿದ ಹೇ:ಳಿಕೆ ಮತ್ತು ಲೇಖನಗಳನ್ನು ಪ್ರಕಟಿಸಲಾಗಿದೆ. ನನ್ನ ಮೌನವನ್ನು ದೌರ್ಬಲ್ಯ ಎಂದು ತಪ್ಪಾಗಿ ತಿಳಿಯಲಾಗಿದೆ’ ಎಂದು ಅವರು ಕಿಡಿ ಕಾರಿದ್ದಾರೆ.

‘ಈ ಸಂಪೂರ್ಣ ಪ್ರಹಸನವು ವಿನಾ ಕಾರಣ ನನ್ನನ್ನು ಟಾರ್ಗೆಟ್ ಮಾಡಿ, ನನಗೆ ಮಸಿ ಬಳಿಯುವ ಯತ್ನವಲ್ಲದೆ ಬೇರೇನೂ ಅಲ್ಲ. ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಆ ಬಗ್ಗೆ ಹೆಚ್ಚೇನೂ ಹೇಳಲಾರೆ. ತನಿಖೆ ಎದುರಿಸಲು ನಾನು ಸಿದ್ಧನಿದ್ದೇನೆ. ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಸತ್ಯಕ್ಕೆ ಜಯ ಸಿಗಲಿದೆ’ ಎಂದು ಬರೆದುಕೊಂಡಿದ್ದಾರೆ.

ದುರಾದೃಷ್ಟಕರ ಸಂಗತಿಯೆಂದರೆ, ಮಾಧ್ಯಮಗಳು, ಸಂವಿಧಾನಿಕ ಹಕ್ಕುಗಳನ್ನು ಉಲ್ಲಂಘಿಸಿ, ಮಾನವೀಯತೆಯನ್ನು ಮರೆತು ನನ್ನನ್ನು ತಪ್ಪಿತಸ್ಥನೆಂದು ತೀರ್ಪು ನೀಡಿವೆ. ಇದರಿಂದ ನನ್ನ ಕುಟುಂಬ ಸಾಕಷ್ಟು ನೋವನ್ನು ಅನುಭವಿಸಿದೆ ಎಂದಿದ್ಧಾರೆ.

'ಟ್ರೋಲಿಂಗ್, ಋಣಾತ್ಮಕತೆ ಮತ್ತು ವಿಷಕಾರಿ ಸಾರ್ವಜನಿಕ ಗ್ರಹಿಕೆಯು ತುಂಬಾ ಬೇಗ ಹರಡುತ್ತದೆ. ನಾನು ಅವಮಾನದಿಂದ ನನ್ನ ಮುಖವನ್ನು ಮರೆಮಾಚುವುದಿಲ್ಲ, ಮಾಧ್ಯಮಗಳು ನನ್ನ ವೈಯಕ್ತಿಕ ವಿಚಾರದಲ್ಲಿ ಅತಿಕ್ರಿಮಿಸಬಾರದು ಎಂದು ನಾನು ಬಯಸುತ್ತೇನೆ. ನನ್ನ ಆದ್ಯತೆ ಯಾವಾಗಲೂ ನನ್ನ ಕುಟುಂಬವಾಗಿದೆ. ಈ ಸಮಯದಲ್ಲಿ ಬೇರೆ ಯಾವುದೂ ನನಗೆ ಮುಖ್ಯವಲ್ಲ’ ಎಂದು ಅವರು ಹೇಳಿದ್ದಾರೆ.

ಪ್ರತಿಯೊಬ್ಬರಿಗೂ ಗೌರವದಿಂದ ಬದುಕುವ ಪರಮಾಧಿಕಾರವಿದೆ. ಹಾಗಾಗಿ, ಅದಕ್ಕೆ ಧಕ್ಕೆ ತರಬೇಡಿ ಎಂದು ಕುಂದ್ರಾ ಮನವಿ ಮಾಡಿದ್ದಾರೆ.

ಲೈಂಗಿಕ ವಿಷಯಕ್ಕೆ ಸಂಬಂಧಿಸಿದ ವಿಡಿಯೊಗಳನ್ನು ಹಂಚಿಕೆ ಮಾಡಿದ ಆರೋಪದಡಿ ಐಪಿಸಿ ಸೆಕ್ಷನ್ ಕಾಯ್ಡೆಗಳ ಅಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದಲ್ಲಿ ಶೆರ್ಲಿನ್ ಚೋಪ್ರಾ, ಪೂನಂ ಪಾಂಡೆ ಅವರನ್ನೂ ಸಹ ಹೆಸರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT