ಶುಕ್ರವಾರ, ಡಿಸೆಂಬರ್ 9, 2022
21 °C

ಯಶ್ ಜತೆ ಮಗಳು ಐರಾ ತುಂಟಾಟ: ವಿಡಿಯೊಗೆ ಅಭಿಮಾನಿಗಳಿಂದ ಮೆಚ್ಚುಗೆ ಮಹಾಪೂರ

ಪ್ರಜಾವಾಣಿ ವೆಬ್ ಡೆ‌ಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾಮಾಜಿಕ ಮಾಧ್ಯಮಗಳ ಮೂಲಕ ಸದಾ ಅಭಿಮಾನಿಗಳ ಸಂಪರ್ಕದಲ್ಲಿರುವ ಚಿತ್ರ ನಟ ಯಶ್, ಆಗಾಗ ತಮ್ಮ ಕುಟುಂಬದ ಚಿತ್ರಗಳು, ವಿಡಿಯೊಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.

ಮಗಳು ಐರಾ ಜತೆಗಿನ ತುಂಟಾಟದ ವಿಡಿಯೊವೊಂದನ್ನು ಸೋಮವಾರ ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಯಶ್, ‘ಆ್ಯನ್ ಏಂಜಲ್ ಇನ್ ಡಿಸ್‌ಗೈಸ್, ಹೌದು, ಅದು ಅವಳೇ!! ಐರಾ’ ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೊಕ್ಕೆ ಅಭಿಮಾನಿಗಳಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. 20 ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಒತ್ತಿದ್ದಾರೆ.

ನಟಿ ರಾಧಿಕಾ ಪಂಡಿತ್ ಕೂಡ ಮಗಳು ಐರಾಳ ಜತೆಗಿನ ಸುಂದರ ಚಿತ್ರವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

‘ಅವಳಲ್ಲಿ ಅವಳ ಅಪ್ಪನ ನೋಟ ಇದೆ. ಆಕೆಯ ವರ್ತನೆಯೂ ಹಾಗೆಯೇ ಇರಬಹುದು. ಆದರೆ, ನಾನು ಆಕೆಯಲ್ಲಿ ನನ್ನನ್ನೇ ಕಾಣುತ್ತೇನೆ. ನನ್ನ ಐರಾಗೆ ನನ್ನ ಆಶೀರ್ವಾದಗಳು’ ಎಂದು ರಾಧಿಕಾ ಪಂಡಿತ್ ಬರೆದುಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು