ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟ್ರೈಲರ್‌ ನೋಡಿ | 21 One Hours: ಕಾಣೆಯಾದ ಹುಡುಗಿಯನ್ನು ಹುಡುಕುತ್ತಾರಾ ಡಾಲಿ?

Last Updated 7 ಮೇ 2022, 7:11 IST
ಅಕ್ಷರ ಗಾತ್ರ

ಬೆಂಗಳೂರು: ಚಂದನವನದ ಖ್ಯಾತಿಯ ನಟಡಾಲಿ ಧನಂಜಯ್‌ ಅಭಿನಯಿಸಿರುವ "ಟ್ವೆಂಟಿ ಒನ್ ಅವರ್ಸ್" ಸಿನಿಮಾದಟ್ರೈಲರ್‌ ಬಿಡುಗಡೆಯಾಗಿದ್ದು ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

‘ಬಡವ ರಾಸ್ಕಲ್‌‘ ಹಿಟ್‌ ಸಿನಿಮಾದ ಬಳಿಕ ಡಾಲಿ"ಟ್ವೆಂಟಿ ಒನ್ ಅವರ್ಸ್" ಚಿತ್ರದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಮೇ ತಿಂಗಳ 20ಕ್ಕೆ ಬಿಡುಗಡೆಯಾಗಲಿದೆ. ಚಿತ್ರವನ್ನುಜೈ ಶಂಕರ್ ನಿರ್ದೇಶನ ಮಾಡಿದ್ದಾರೆ.

ಟ್ರೈಲರ್‌ ನೋಡಿ....

ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಇರುವ ಈ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂದು ಚಿತ್ರತಂಡ ವಿಶ್ವಾಸ ವ್ಯಕ್ತಪಡಿಸಿದೆ. ಮಲೆಯಾಳಂ ಹುಡುಗಿಯೊಬ್ಬಳು ಬೆಂಗಳೂರಿನಲ್ಲಿ ಕಾಣೆಯಾಗುತ್ತಾಳೆ. ಅವಳನ್ನು ಹುಡುಕುವುದೇ ಇಡೀ ಸಿನಿಮಾದ ಕತೆ ಎಂಬುದು ಟ್ರೈಲರ್‌ ನೋಡಿದರೆ ತಿಳಿಯುತ್ತಿದೆ.

ರುಪರ್ಟ್ ಫರ್ನಾಂಡಿಸ್ ಸಂಗೀತ, ತಿರುನವುಕ್ಕರಸು ಛಾಯಾಗ್ರಹಣ, ರಿಚರ್ಡ್ ಕೆವಿನ್ ಎಡಿಟಿಂಗ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT