ಬಾಲಿವುಡ್ ನಟ, ನಿರ್ಮಾಪಕ ಜಾಕಿ ಭಗ್ನಾನಿ ಹಾಗೂ ಬಹುಭಾಷಾ ನಟಿ ರಕುಲ್ ಪ್ರೀತ್ ಸಿಂಗ್ ಅವರು ತಮ್ಮ ಎರಡನೇ ವರ್ಷದ ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ.

ಈ ಕುರಿತು ಜಾಕಿ ಭಗ್ನಾನಿ ಅವರು ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಪತ್ನಿ ರಕುಲ್ ಪ್ರೀತ್ ಸಿಂಗ್ ಅವರಿಗೆ ವಿವಾಹ ವಾರ್ಷಿಕೋತ್ಸವಕ್ಕೆ ಶುಭಕೋರಿದ್ದಾರೆ.

ವಿಶೇಷ ಪೋಸ್ಟ್ ಜೊತೆಗೆ ‘ನಿಮ್ಮ ಮೇಲಿನ ಪ್ರೀತಿಯನ್ನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಾಗುವುದಕ್ಕಿಂತ ಹೆಚ್ಚಾಗಿ ನಾನು ನಿನ್ನನ್ನು ಪ್ರೀತಿಸುತ್ತೇನೆ. ನೀವು ನನ್ನ ಜೀವನದಲ್ಲಿ ಎಷ್ಟು ಮುಖ್ಯ ಎಂದು ವರ್ಣಿಸಲು ಸಾಧ್ಯವಿಲ್ಲ. ಆದರೆ ನನ್ನ ಜೀವನದ ಕಷ್ಟ, ಸುಖಗಳಲ್ಲಿ ಭಾಗಿಯಾಗಿರುವುದಕ್ಕೆ ಕೃತಜ್ಞತೆ ತಿಳಿಸುತ್ತೇನೆ’ ಎಂದಿದ್ದಾರೆ.
.ವಿವಾಹ ವಾರ್ಷಿಕೋತ್ಸವದ ಸಂಭ್ರಮದಲ್ಲಿ ‘12th ಫೇಲ್‘ ಸಿನಿಮಾ ನಟ ವಿಕ್ರಾಂತ್ ಮಾಸ್ಸಿ.
‘ನಿಮ್ಮ ಜೊತೆ ಕಳೆದ ಈ ಎರಡು ವರ್ಷಗಳು ಕ್ಷಣದಂತೆ ಅನಿಸುತ್ತಿದೆ. ನಿಮ್ಮ ಜೊತೆ ಕಳೆದ ಪ್ರತಿ ಕ್ಷಣವೂ ಅತ್ಯಮೂಲ್ಯವಾಗಿತ್ತು. ನಿಮ್ಮ ಮೇಲಿನ ಅಪಾರ ಪ್ರೀತಿಯನ್ನು ವಿವರಿಸಲು ಸಾಧ್ಯ ಇಲ್ಲ. ನನಗೆ ಅರಿವಿಲ್ಲದಂತೆಯೇ ನಿಮ್ಮಿಂದ ನಾನು ತುಂಬಾ ವಿಷಯಗಳನ್ನು ಕಲಿತಿದ್ದೇನೆ. ನಾನು ಸೋತಾಗ ನೀವೇ ನನಗೆ ದೊಡ್ಡ ಶಕ್ತಿ. ಕತ್ತಲೆ ನಡುವೆಯೂ ದಾರಿ ತೋರುವ ಮಿನುಗುವ ತಾರೆ’ ಎಂದು ಬರೆದುಕೊಂಡು ಶುಭಕೋರಿದ್ದಾರೆ.

ಈ ಜೋಡಿಯು 2024ರ ಫೆ. 21ರಂದು ಗೋವಾದಲ್ಲಿ ಪಂಜಾಬಿ ಹಾಗೂ ಸಿಂಧಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತ್ತು.

ಅಕ್ಷಯ್ ಕುಮಾರ್, ಟೈಗರ್ ಶ್ರಾಫ್ ಮತ್ತು ಶಿಲ್ಪಾ ಶೆಟ್ಟಿ ಕುಂದ್ರಾ ಸೇರಿದಂತೆ ಚಿತ್ರರಂಗದ ಅನೇಕ ಸಿನಿ ತಾರೆಯರು ಈ ಜೋಡಿಯ ವಿವಾಹಕ್ಕೆ ಆಗಮಿಸಿ ಶುಭಕೋರಿದ್ದರು. ರಕುಲ್ ಪ್ರೀತ್ ಸಿಂಗ್ ಅವರು ಕನ್ನಡದಲ್ಲಿ ಗಿಲ್ಲಿ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತಿಚೀಗೆ ‘ದೇ ದೇ ಪ್ಯಾರ್ ದೇ 2’ ಚಿತ್ರದಲ್ಲಿ ನಟಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.