ವಿಕ್ರಮ್ ಪ್ರಭು ನಿರ್ದೇಶನದ ಚೊಚ್ಚಲ ಚಿತ್ರ ‘ವೆಡ್ಡಿಂಗ್ ಗಿಫ್ಟ್’ನ ಚಿತ್ರೀಕರಣ ಪೂರ್ಣಗೊಂಡಿದೆ. ಡಾರ್ಕ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾದಲ್ಲಿ ಲಾಯರ್ ಪಾತ್ರದಲ್ಲಿ ನಟಿ ಪ್ರೇಮ ನಟಿಸಿದ್ದು,ಸುಮಾರು ನಾಲ್ಕು ವರ್ಷದ ಬಳಿಕ ಪ್ರೇಮಾ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

‘ಕಥೆ ವಿಭಿನ್ನವಾಗಿತ್ತು. ಮೊದಲ ಸಲ ಲಾಯರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಎಲ್ಲಾ ಚಿತ್ರಗಳನ್ನು ಒಪ್ಪಿಕೊಳ್ಳುವುದಿಲ್ಲ. ಪಾತ್ರ ಚೆನ್ನಾಗಿದ್ದರಷ್ಟೇ ಒಪ್ಪಿಕೊಳ್ಳುತ್ತೇನೆ. ಈ ಚಿತ್ರದ ಕಥೆ ಬಗ್ಗೆ ಒಂದೆಳೆ ಹೇಳಿದರೂ, ಪೂರ್ತಿ ಹೇಳಿದಂತೆ. ಉತ್ತಮ ಸಂದೇಶವಿರುವ ಈ ಚಿತ್ರದಲ್ಲಿ ನಟಿಸಿರುವ ಖುಷಿಯಿದೆ’ ಎಂದು ಸುದ್ದಿಗೋಷ್ಠಿಯಲ್ಲಿ ತಮ್ಮ ಅನುಭವ ಹಂಚಿಕೊಂಡರು ಪ್ರೇಮ.

‘ಡಿಸೆಂಬರ್ 30ರಂದೇ ಚಿತ್ರೀಕರಣ ಮುಗಿದಿದೆ. ಬೆಂಗಳೂರು, ತುಮಕೂರು, ಉಡುಪಿ, ಮಂಗಳೂರು ಮುಂತಾದ ಕಡೆ ಮೂವತ್ತೇಳು ದಿನಗಳ ಚಿತ್ರೀಕರಣ ನಡೆದಿದೆ. ಗಂಡ–ಹೆಂಡತಿ ನಡುವಿನ ಸಂಬಂಧಗಳ ಕಥಾಹಂದರವಿರುವ ಚಿತ್ರವಿದು. ಸೆಕ್ಷನ್ 498 ಸಂಬಂಧಿಸಿದ ಕೆಲವು ಸನ್ನಿವೇಶಗಳು ನಮ್ಮ ಚಿತ್ರದಲ್ಲಿವೆ. ನಿಶಾನ್ ನಾಣಯ್ಯ - ಸೋನುಗೌಡ ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಅಚ್ಯುತ್ ಕುಮಾರ್, ಪವಿತ್ರ ಲೋಕೇಶ್ ತಾರಾಬಳಗದಲ್ಲಿದ್ದಾರೆ. ಏಪ್ರಿಲ್ ವೇಳೆಗೆ ಚಿತ್ರ ಬಿಡುಗಡೆಗೆ ಸಿದ್ಧತೆ ನಡೆಸಿದ್ದೇವೆ’ ಎಂದರು ನಿರ್ದೇಶಕ ವಿಕ್ರಮ್ ಪ್ರಭು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.