ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಟ ದರ್ಶನ್ ವಿರುದ್ಧದ ಹಳೆಯ ಪ್ರಕರಣಗಳು ಯಾವೆಲ್ಲಾ?

Published 12 ಜೂನ್ 2024, 4:38 IST
Last Updated 12 ಜೂನ್ 2024, 4:38 IST
ಅಕ್ಷರ ಗಾತ್ರ

ಬೆಂಗಳೂರು: ತಮ್ಮ ಸ್ನೇಹಿತೆಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರನ್ನು ಕೊಲೆ ಮಾಡಿದ್ದ ಆರೋಪದಡಿ ನಟ ದರ್ಶನ್‌ ತೂಗುದೀಪ ಅವರನ್ನು ಬಂಧಿಸಿರುವ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರು ದಿನ ಕಸ್ಟಡಿಗೆ ಪಡೆದುಕೊಂಡಿದ್ದಾರೆ.

ಒಂದಲ್ಲ ಒಂದು ವಿವಾದದಲ್ಲಿ ಸುದ್ದಿಯಾಗುವ ದರ್ಶನ್‌ ಮೇಲೆ ಪ್ರಕರಣಗಳು ದಾಖಲಾಗುತ್ತಿರುವುದು ಇದೇ ಮೊದಲೇನಲ್ಲ. ಇತ್ತೀಚೆಗಷ್ಟೇ ಬೆಂಗಳೂರಿನ ಪಬ್‌ ಒಂದರಲ್ಲಿ ನಿಯಮ ಉಲ್ಲಂಘಿಸಿ ತಡರಾತ್ರಿವರೆಗೆ ಪಾರ್ಟಿ ನಡೆಸಿದ ಆರೋಪದ ಮೇಲೆ ದರ್ಶನ್ ವಿರುದ್ಧ ದೂರು ದಾಖಲಾಗಿತ್ತು.

ದರ್ಶನ್‌ ವಿರುದ್ಧದ ಪ್ರಕರಣಗಳು

  • ಪತ್ನಿ ವಿಜಯಲಕ್ಷ್ಮಿ ಮೇಲೆ ಹಲ್ಲೆ ನಡೆಸಿದ್ದ ಆರೋಪದಡಿ ದರ್ಶನ್ ವಿರುದ್ಧ 2011ರಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ದರ್ಶನ್‌ ಅವರು 28 ದಿನ ಜೈಲಿನಲ್ಲಿದ್ದರು

  • 2019ರಲ್ಲಿ ಸಿನಿಮಾ ಚಿತ್ರೀಕರಣದ ವೇಳೆ ಸಹ ನಟನ ಮೇಲೆ ದರ್ಶನ್‌ ಹಲ್ಲೆ ನಡೆಸಿದ್ದರು ಎನ್ನಲಾಗಿತ್ತು. ಆದರೆ ದೂರು ದಾಖಲಾಗಿರಲಿಲ್ಲ

  • 2021ರಲ್ಲಿ ಸಾಲ ಹಾಗೂ ವಂಚನೆ ಸಂಬಂಧ ನಿರ್ಮಾಪಕರೊಬ್ಬರು ಹಾಗೂ ದರ್ಶನ್ ನಡುವೆ ಆರೋಪ– ಪ್ರತ್ಯಾರೋಪ ನಡೆದಿತ್ತು

  • ಮೈಸೂರಿನ ಹೋಟೆಲ್‌ ಸಿಬ್ಬಂದಿಯ ಮೇಲೆ ದರ್ಶನ್‌ ಅವರು ಹಲ್ಲೆ ನಡೆಸಿದ್ದಾರೆ ಎಂದು ನಿರ್ದೇಶಕರೊಬ್ಬರು ಆರೋಪಿಸಿದ್ದರು. ಪೊಲೀಸರು ಹೋಟೆಲ್‌ಗೆ ತೆರಳಿ ತನಿಖೆ ನಡೆಸಿದ್ದರು.

  • 2023ರ ನವೆಂಬರ್‌ನಲ್ಲಿ ದರ್ಶನ್‌ ಮನೆಯ ಸಾಕು ನಾಯಿ ಮಹಿಳಾ ವಕೀಲರೊಬ್ಬರಿಗೆ ಕಚ್ಚಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜರಾಜೇಶ್ವರಿ ಠಾಣಾ ಪೊಲೀಸರು ದರ್ಶನ್‌ಗೆ ನೋಟಿಸ್ ನೀಡಿದ್ದರು.

  • ‘ಕಾಟೇರ’ ಸಿನಿಮಾ ಯಶಸ್ಸಿಗೆ ಸಂಬಂಧಿಸಿ ಬೆಂಗಳೂರಿನ ಜೆಟ್‌ಲ್ಯಾಗ್‌ ಪಬ್‌ನಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ದರ್ಶನ್‌ ಸೇರಿ ಹಲವರು ನಿಯಮ ಉಲ್ಲಂಘಿಸಿ ತಡರಾತ್ರಿ ವರೆಗೆ ಪಾರ್ಟಿ ನಡೆಸಿದ್ದ ಆರೋಪವಿತ್ತು. ಸುಬ್ರಹ್ಮಣ್ಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದರ್ಶನ್‌ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT