ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಸಾವಿಗೂ ಮುನ್ನ ಸುಶಾಂತ್‌ ಗೂಗಲ್‌ನಲ್ಲಿ ಹುಡುಕಿದ್ದೇನು?

. Updated:

ಅಕ್ಷರ ಗಾತ್ರ : | |

Prajavani

ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿಗೂ ಮೊದಲು ಮೂರು ವಿಷಯಗಳನ್ನು ಗೂಗಲ್‌ನಲ್ಲಿ ಹುಡುಕಿದ್ದಾರೆ ಎಂದು ಮುಂಬೈ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಆ ಪ್ರಕಾರ ಅವರು ಕೆಲವು ಸಾಮಾನ್ಯ ಸುದ್ದಿಗಳನ್ನು ಹುಡುಕಿದ್ದಾರೆ, ಜೊತೆಗೆ ತಮ್ಮ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಹೆಸರು ಹುಡುಕಿದ್ದಾರೆ ಅಷ್ಟೇ ಅಲ್ಲದೆ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಲೇಖನಗಳನ್ನು ಹುಡುಕಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಕೆಲ ಗಂಟೆಗಳ ಮೊದಲು ತನ್ನ ಹೆಸರನ್ನೂ ಗೂಗಲ್‌ನಲ್ಲಿ ಹುಡುಕಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಅವರ ಲ್ಯಾಪ್‌ಟಾಪ್ ಹಾಗೂ ಮೊಬೈಲ್‌ನ ವಿಧಿವಿಜ್ಞಾನ ತನಿಖೆಯಿಂದ ಈ ಮಾಹಿತಿ ತಿಳಿದುಬಂದಿದೆ. ಅವರ ಬ್ಯಾಂಕ್ ಖಾತೆಯ ಪರಿಶೀಲನೆಯ ಪ್ರಕಾರ 2.8 ಕೋಟಿ ಹಣವನ್ನು ಜಿಎಸ್‌ಟಿ ಮೂಲಕ ವರ್ಗಾವಣೆ ಮಾಡಲಾಗಿತ್ತು. ಸಿನಿಮಾ ಕ್ಷೇತ್ರದ 40 ಮಂದಿಯ ಹೇಳಿಕೆಗಳನ್ನು ಈ ಪ್ರಕರಣದಲ್ಲಿ ದಾಖಲಿಸಲಾಗಿದೆ.

ಮಾಜಿ ಮ್ಯಾನೇಜರ್ ದಿಶಾ ಸಾವಿನೊಂದಿಗೆ ಸುಶಾಂತ್ ಹೆಸರನ್ನು ತಳಕು ಹಾಕಲಾಗಿತ್ತು. ಆ ಕಾರಣಕ್ಕೆ ಸುಶಾಂತ್ ಮನನೊಂದಿದ್ದರು ಎನ್ನಲಾಗಿದೆ. ಜೊತೆಗೆ ಈ ವಿಷಯಗಳನ್ನು ಗೂಗಲ್‌ನಲ್ಲಿ ಹುಡುಕಲು ಅದೇ ಕಾರಣ ಎಂದಿವೆ ಪೊಲೀಸ್ ಮೂಲಗಳು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು