ಗುರುವಾರ , ಆಗಸ್ಟ್ 11, 2022
27 °C

ಆರ್‌ಆರ್‌ಆರ್ ಸಿನಿಮಾದಲ್ಲಿ ಶ್ರೀಯಾ ಶರಣ್‌ ಪಾತ್ರವೇನು?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅನುಭವಿ ತಂತ್ರಜ್ಞರು ಹಾಗೂ ಸ್ಟಾರ್‌ ನಟ–ನಟಿಯರ ಸಮ್ಮಿಲನದಲ್ಲಿ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ‘ಆರ್‌ಆರ್‌ಆರ್’ ಸಿನಿಮಾ ತಯಾರಾಗುತ್ತಿದೆ. ಈ ಸಿನಿಮಾದಲ್ಲಿ ಜೂನಿಯರ್ ಎನ್‌ಟಿಆರ್‌, ರಾಮ್‌ಚರಣ್‌, ಅಜಯ್‌ ದೇವಗನ್‌, ಆಲಿಯಾ ಭಟ್‌ ಮೊದಲಾದವರು ನಟಿಸುತ್ತಿದ್ದಾರೆ. ದಕ್ಷಿಣದ ಸ್ಟಾರ್‌ ನಟಿ ಶ್ರೀಯಾ ಶರಣ್ ಕೂಡ ಮುಖ್ಯಪಾತ್ರವೊಂದಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ದೊಡ್ಡ ಬಜೆಟ್‌ನ ಸಿನಿಮಾದಲ್ಲಿ ಶ್ರಿಯಾ ಅವರದ್ದು ಸಣ್ಣ ಪಾತ್ರವಾದರೂ ಮಹತ್ವದ ಪಾತ್ರ ಎನ್ನುತ್ತಿವೆ ಮೂಲಗಳು.

ಶ್ರೀಯಾ ಸಿನಿಮಾದಲ್ಲಿ ಅಜಯ್ ಜೊತೆ ತೆರೆ ಹಂಚಿಕೊಳ್ಳಲಿದ್ದು ಸಿನಿಮಾದ ಕೊನೆಯ ಹಂತದಲ್ಲಿ ಕಡಿಮೆ ಅವಧಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ತಮ್ಮ ‘ಛತ್ರಪತಿ’ ನಾಯಕಿಯನ್ನು ರಾಜಮೌಳಿ ಚಿತ್ರದಲ್ಲಿ ಹೇಗೆ ಬಳಸಿಕೊಳ್ಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ. ಶ್ರೀಯಾ ಸದ್ಯದಲ್ಲೇ ಶೂಟಿಂಗ್ ಆರಂಭಿಸಲಿದ್ದು ಆರ್‌ಆರ್‌ಆರ್ ತಂಡ ಸೇರಿಕೊಳ್ಳಲಿದ್ದಾರೆ. ರಾಮೋಜಿ ಫಿಲ್ಮ ಸಿಟಿಯಲ್ಲಿ ನಡೆಯುತ್ತಿರುವ ಶೂಟಿಂಗ್‌ಗೆ ಆಲಿಯಾ ಭಟ್ ಈಗಾಗಲೇ ಸೇರಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು