ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಯಾರೇ ಕೊಲೆಗಾರರಾಗಿದ್ದರೂ ಕಠಿಣ ಶಿಕ್ಷೆಯಾಗಲಿ: ಇಂದ್ರಜಿತ್ ಲಂಕೇಶ್

Published 13 ಜೂನ್ 2024, 8:30 IST
Last Updated 13 ಜೂನ್ 2024, 8:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆಯನ್ನು ಇಡೀ ಚಿತ್ರರಂಗ ಖಂಡಿಸುತ್ತದೆ. ಯಾರೇ ಕೊಲೆ ಮಾಡಿದರೂ ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಟ, ನಿರ್ದೇಶಕ ಇಂದ್ರಜೀತ್ ಲಂಕೇಶ್ ಆಗ್ರಹಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಲೆ ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌. ಕೊಲೆ ಆರೋಪಿ ಯಾರು ಎಂದು ಕಮಿಷನರ್ ಸ್ಪಷ್ಟಪಡಿಸಿದ ನಂತರ ಮೃತರ ಕುಟುಂಬದ ಪರವಾಗಿ ನಾನು ಪ್ರತಿಭಟನೆ ಮಾಡುತ್ತೇನೆ ಎಂದರು.

ನನ್ನ ಸಹೋದರಿ ಗೌರಿ‌ ಕೊಲೆಗೆ ಇನ್ನೂ ನ್ಯಾಯ ಸಿಕ್ಕಿಲ್ಲ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅವರ ಪತ್ನಿಗೂ ಅನ್ಯಾಯವಾಗಿದೆ. ಅವರಿಗೂ ನ್ಯಾಯ‌ ಕೊಡಿಸುವ ಕೆಲಸ ಆಗಬೇಕು ಎಂದು ಆಗ್ರಹಿಸಿದರು.

ಸಾಮಾಜಿಕ ಜಾಲತಾಣಗಳ ಮೂಲಕ ಕೆಲವರು ದ್ವೇಷ ಹರಡುವ, ತೇಜೋವಧೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಬೇಕು. ಅಂತವರ ವಿರುದ್ದ ಸೈಬರ್ ಕ್ರೈಂ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇಂತಹ ಪ್ರಕರಣದಲ್ಲಿ‌ ಭಾಗಿಯಾದವರು ನಟ, ರಾಜಕಾರಣಿ ಯಾರೇ ಆದರೂ ಅವರಿಗೆ ರಾಜಮರ್ಯಾದೆ ಕೊಡಬಾರದು. ರೇಣಾಕಾಸ್ವಾಮಿ ಪತ್ನಿ ಐದು ತಿಂಗಳ ಗರ್ಭಿಣಿಯಾಗಿದ್ದು, ಅವರನ್ನು ಭೇಟಿಯಾಗಿ ಸಾಂತ್ವನ ಹೇಳುತ್ತೇನೆ ಎಂದರು.

ಮಾಧ್ಯಮದವರು ವಾಸ್ತವ ವರದಿ ಮಾಡಿದ್ದರಿಂದ ರೇಣುಕಾಸ್ವಾಮಿ ಪ್ರಕರಣ ಗಂಭೀರತೆ ಪಡೆದಿದೆ‌. ಇಲ್ಲದಿದ್ದರೆ ಇದನ್ನು ಕಸದ ಬುಟ್ಟಿಗೆ ಎಸೆಯುವ ಸಾಧ್ಯತೆ ಇತ್ತು. ಬೆಂಗಳೂರಿನಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ನಡೆದಿದ್ದು ಖಂಡನೀಯ. ಸರ್ಕಾರ ಸೂಕ್ತ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT