ಸೂಪರ್‌ಸ್ಟಾರ್ ಉಪೇಂದ್ರ ನಟನೆಯ ‘ಕಬ್ಜ’ ಸಿನಿತಂಡ ಜನವರಿ 14ರ ಸಂಕ್ರಾಂತಿಯಂದು ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಲು ಸಿದ್ಧತೆ ನಡೆಸುತ್ತಿದೆ. ಅಂದು ಕಬ್ಜ ಸಿನಿಮಾದ ಟೀಸರ್ ಬಿಡುಗಡೆಯಾಗುತ್ತದೆ ಎಂಬ ಮಾಹಿತಿ ಒಂದು ಕಡೆಯಾದರೆ, ಈ ಸಿನಿಮಾಕ್ಕೆ ಪ್ಯಾನ್ ಇಂಡಿಯಾ ಸೂಪರ್‌ಸ್ಟಾರ್ ನಟರೊಬ್ಬರು ಸೇರ್ಪಡೆಯಾಗುತ್ತಿದ್ದು ಅವರು ಯಾರು ಎಂಬುದನ್ನು ಅಂದು ತಿಳಿಸಲಾಗುತ್ತದೆ ಎನ್ನುತ್ತಿದೆ ಇನ್ನೊಂದು ಮೂಲ. ಆ ಸುದ್ದಿ ನಿಜವೇ ಆದರೆ ಅಭಿಮಾನಿಗಳಿಗೆ ಹಬ್ಬದ ಸಂಭ್ರಮ ಡಬ್ಬಲ್ ಆಗುವುದರಲ್ಲಿ ಸಂಶಯವಿಲ್ಲ.

ಆರ್. ಚಂದ್ರು ನಿರ್ದೇಶನದ ಈ ಸಿನಿಮಾ ಮಹತ್ವಾಕಾಂಕ್ಷೆಯ ಸಿನಿಮಾವಾಗಿದ್ದು ಬೆಂಗಳೂರು, ಹೈದರಾಬಾದ್ ಮುಂತಾದ ಕಡೆ ನಿರ್ಮಿಸಲಾಗಿರುವ ಅದ್ದೂರಿ ಸೆಟ್‌ಗಳಲ್ಲಿ ಚಿತ್ರೀಕರಣ ನಡೆಸಲಾಗಿದ್ದು, ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಈ ತಿಂಗಳ ಅಂತ್ಯದಿಂದ ಮುಂದಿನ ಹಂತದ ಚಿತ್ರೀಕರಣ ಆರಂಭವಾಗಲಿದೆ. ಉಪೇಂದ್ರ ಈ ಚಿತ್ರಕ್ಕಾಗಿ ನಾಲ್ಕು ಘಂಟೆಗೂ ಹೆಚ್ಚು ಕಾಲ ವ್ಯಾಯಾಮ ಮಾಡಿ, ಚಿತ್ರೀಕರಣಕ್ಕೆ ಬೇಕಾದ ಹಾಗೆ ಸಜ್ಜಾಗಿ, ಬಹಳ ಸುಂದರವಾಗಿ ಕಾಣಿಸಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಪ್ರಕಾಶ್ ರಾಜ್, ಜಯಪ್ರಕಾಶ್ ರೆಡ್ಡಿ, ಪ್ರದೀಪ್ ರಾವತ್ ಹಾಗೂ ಕಬೀರ್ ದುಹಾನ್ ಸಿಂಗ್, ಕಾಮರಾಜನ್(ಐ ಮೂವಿ ಖ್ಯಾತಿ), ಜಗಪತಿ ಬಾಬು, ರಾಹುಲ್ ಜಗತಪ್, ಅನೂಪ್ ರೇವಣ್ಣ, ಜಾನ್ ಕೊಕ್ಕಿನ್, ರಾಹುಲ್ ದೇವ್, ನವೀನ್, ಕೋಟ ಶ್ರೀನಿವಾಸ್, ಜಯಪ್ರಕಾಶ್, ಕಾಟ್ ರಾಜು, ಸುಬ್ಬರಾಜು ಮುಂತಾದ ಖ್ಯಾತನಟರು ಬಣ್ಣ ಹಚ್ಚಲಿದ್ದಾರೆ. ಚಿತ್ರಕ್ಕೆ ನಾಯಕಿ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ.

ಬಹುಭಾಷಾ ಚಿತ್ರವಾಗಿರುವ ಕಜ್ಜ ಕನ್ನಡ, ತೆಲುಗು, ತಮಿಳಿನಲ್ಲಿ ಶೂಟಿಂಗ್ ಆಗುತ್ತಿದ್ದು, ಹಿಂದಿ ಸೇರಿದಂತೆ ಉಳಿದ 4 ನಾಲ್ಕು ಭಾಷೆಗಳಿಗೆ ಡಬ್ ಆಗುತ್ತಿದೆ. ಉಪೇಂದ್ರ ಅಭಿಮಾನಿಗಳು ಮಾತ್ರ ಚಿತ್ರತಂಡ ನೀಡುವ ಸರ್ಪ್ರೈಸ್‌ಗೆ ಕಾತರದಿಂದ ಕಾಯುತ್ತಿರುವುದು ಸುಳ್ಳಲ್ಲ.

ಎಂ.ಟಿ.ಬಿ ನಾಗರಾಜ್ ಅರ್ಪಿಸುವ, ಶ್ರೀ ಸಿದ್ದೇಶ್ವರ ಎಂಟರ್‌ಪ್ರೈಸಸ್ ಲಾಂಛನದಲ್ಲಿ ಆರ್. ಚಂದ್ರು ನಿರ್ಮಿಸುತ್ತಿರುವ ಕಬ್ಜ ಚಿತ್ರಕ್ಕೆ ರವಿ ಬಸ್ರೂರು ಸಂಗೀತ ನಿರ್ದೇಶನವಿದೆ. ಕಾರ್ಯಕಾರಿ ನಿರ್ಮಾಪಕರಾಗಿ ಮುನೀಂದ್ರ ಹಾಗೂ ಲೈನ್ ಪ್ರೊಡ್ಯುಸರ್ ಆಗಿ ರಾಜಶೇಖರ್ ಕಾರ್ಯನಿರ್ವಹಿಸುತ್ತಿದ್ದಾರೆ. ಎ.ಜೆ.ಶೆಟ್ಟಿ ಛಾಯಾಗ್ರಹಣ, ಮಹೇಶ್ ಸಂಕಲನ, ರಾಜು ಸುಂದರಂ, ಗಣೇಶ್, ಶೇಖರ್ ನೃತ್ಯ ನಿರ್ದೇಶನ ಹಾಗೂ ರವಿವರ್ಮ, ವಿಕ್ರಂಮೋರ್, ವಿಜಯ್ ಸಾಹಸ ನಿರ್ದೇಶನದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.