ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜಕೀಯದಲ್ಲಿ ಮಹಿಳಾ ಮೀಸಲಾತಿ ಬಗ್ಗೆ ನಟಿ ಅದಾ ಶರ್ಮಾ ಮಾತು

Published 27 ಸೆಪ್ಟೆಂಬರ್ 2023, 10:09 IST
Last Updated 27 ಸೆಪ್ಟೆಂಬರ್ 2023, 10:09 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆಯಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಮಹಿಳೆಯರು ಧ್ವನಿಗೂಡಿಸಲು ಅನುಕೂಲವಾಗಲಿದೆ ಎಂದು ನಟಿ ಆದಾ ಶರ್ಮಾ ತಿಳಿಸಿದ್ದಾರೆ.

ಮಹಿಳಾ ಮೀಸಲಾತಿ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳಾ ಸಬಲೀಕರಣದ ಮೂಲಕ ಹೆಣ್ಣು ಮಕ್ಕಳನ್ನು ಪ್ರೋತ್ಸಾಹಿಸಬೇಕು. ಲೋಕಸಭಾ ಮತ್ತು ರಾಜ್ಯಸಭೆಯಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿ ಸ್ಥಾನಗಳನ್ನು ಒದಗಿಸುವ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರವಾಗಿರುವುದು ಬಹಳ ಸಂತೋಷವಾಗಿದೆ. ಈ ಮೂಲಕ ಮಹಿಳೆಯ ಧ್ವನಿ ರಾಜಕೀಯ ಕ್ಷೇತ್ರದಲ್ಲಿ ಹೆಚ್ಚಾಗಲಿದೆ ಎಂದಿದ್ದಾರೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ

ಈ ಮಸೂದೆಯಿಂದಾಗಿ ಮಹಿಳೆಯರು ರಾಜಕೀಯಕ್ಕೆ ಬರಲು ಸ್ಫೂರ್ತಿಯಾಗುತ್ತದೆ ಎಂದು ನಟಿ ತಮನ್ನಾ ಹೇಳಿದ್ದರು. ಹಲವು ಬಾಲಿವುಡ್‌ ನಟಿಯರು ಸಹ ಶ್ಲಾಘಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT