ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಯಶ್‌‘ ಜೊತೆ ಸಿನಿಮಾ ಖಚಿತಪಡಿಸಿದ ತೆಲುಗು ನಿರ್ಮಾಪಕ ದಿಲ್ ರಾಜು

Last Updated 6 ಏಪ್ರಿಲ್ 2023, 5:40 IST
ಅಕ್ಷರ ಗಾತ್ರ

ಹೈದರಾಬಾದ್‌: ಕನ್ನಡದ ಸ್ಟಾರ್‌ ನಟ ಯಶ್ ‘ಕೆಜಿಎಫ್ 2’ ತೆರೆಕಂಡ ಬಳಿಕ ಅವರು ದೊಡ್ಡ ಬ್ರೇಕ್ ಪಡೆದಿದ್ದಾರೆ. ಮುಂದಿನ ದಿನಗಳಲ್ಲಿ ಯಶ್‌ ತೆಲುಗಿನ ದಿಲ್ ರಾಜು ಬ್ಯಾನರ್‌ ಅಡಿಯಲ್ಲಿ ನಟಿಸುತ್ತಿದ್ದಾರೆ.

ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆಯ ಮೂಲಕ ದಿಲ್‌ ರಾಜು ಬಿಗ್‌ ಬಜೆಟ್‌ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಇತ್ತೀಚೆಗೆ ತೆರೆಗೆ ಬಂದ ದಳಪತಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ನಟನೆಯ ‘ವಾರಿಸು’ ಬಾಕ್ಸ್ ಆಫೀಸ್​ನಲ್ಲಿ 300+ ಕೋಟಿ ರೂಪಾಯಿ ಗಳಿಕೆ ಮಾಡಿತು.

ಯಶ್ ಮುಂದಿನ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ.ಯಶ್‌ ಜೊತೆ ದಿಲ್‌ ರಾಜು ಸಿನಿಮಾ ಮಾಡುವುದು ಖಚಿತವಾಗಿದೆ. ಆದರೆ ಯಶ್‌ ಅವರ 19ನೇ ಅಥವಾ 20ನೇ ಸಿನಿಮಾವೇ? ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಯಶ್ ಅವರ 19ನೇ ಚಿತ್ರಕ್ಕೆ ದಿಲ್ ರಾಜು ಬಂಡವಾಳ ಹಾಕುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಇತ್ತೀಚೆಗೆ ಟ್ವಿಟರ್​ನಲ್ಲಿ ಆಸ್ಕ್ ಮಿ ಎನಿಥಿಂಗ್ ಸೆಷನ್ ನಡೆಸಲಾಯಿತು. ಈ ವೇಳೆ ಯಶ್ ಅಭಿಮಾನಿಯೊಬ್ಬರು ‘ಯಶ್ ಜೊತೆ ಸಿನಿಮಾ ನಿರೀಕ್ಷಿಸಬಹುದೇ’ ಎಂದು ದಿಲ್​ ರಾಜುಗೆ ಪ್ರಶ್ನೆ ಕೇಳಿದ್ದರು. ಇದಕ್ಕೆ ದಿಲ್ ರಾಜು ಪರವಾಗಿ ಉತ್ತರಿಸಿರುವ ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಸಂಸ್ಥೆ ‘ಹೌದು’ ಎನ್ನುವ ಉತ್ತರ ನೀಡಿದೆ.

ದಿಲ್ ರಾಜು ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಸದ್ಯ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್​’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT