ಭಾನುವಾರ, ಆಗಸ್ಟ್ 9, 2020
22 °C

ಯಶ್‌– ರಾಧಿಕಾ ಡಾನ್ಸ್‌ಗೆ ಅಭಿಮಾನಿಗಳು ಫಿದಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

‘ರಾಕಿಂಗ್‌ ಸ್ಟಾರ್‌’ ಯಶ್‌ ‘ಕೆಜಿಎಫ್‌ ಚಾಪ್ಟರ್‌ 2’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ, ಯಶ್‌ ಮತ್ತು ರಾಧಿಕಾ ಪಂಡಿತ್‌ ದಂಪತಿ ಎರಡನೇ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಅಂದಹಾಗೆ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಂಡು ಇಂದಿಗೆ ಮೂರು ವಸಂತ ಸಂದಿರುವುದು ಹೊಸ ಸುದ್ದಿ.

ಇಂತಹ ಸಂತಸದ ಕ್ಷಣವನ್ನು ಈ ಜೋಡಿ ಸೊಗಸಾದ ನೃತ್ಯದ ವಿಡಿಯೊ ಮೂಲಕ ಹಂಚಿಕೊಂಡಿದೆ. ಹಿಂದಿ ಚಿತ್ರವೊಂದರ ಐಟಂ ಸಾಂಗ್‌ಗೆ ಯಶ್‌ ಮತ್ತು ರಾಧಿಕಾ ಹಾಕಿರುವ ಸಖತ್ ಸ್ಟೆಪ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಧಿಕಾ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೊ ಹಂಚಿಕೊಂಡಿದ್ದಾರೆ. ಜೊತೆಗೆ, ‘ನಿನ್ನ ತಾಳಕ್ಕೆ ನಾನು ಈಗಲೂ ಕುಣಿಯುತ್ತೇನೆ’ ಎಂದು ಬರೆದುಕೊಂಡಿದ್ದಾರೆ. ಇಲ್ಲಿಯವರೆಗೂ ನಾಲ್ಕೂವರೆ ಲಕ್ಷ ಜನರು ಈ ವಿಡಿಯೊ ವೀಕ್ಷಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು