ಮಂಗಳವಾರ, ಜನವರಿ 18, 2022
22 °C

ಮೂರನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿ ಐರಾ ಯಶ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

Radhika Pandith

ಬೆಂಗಳೂರು: ರಾಧಿಕಾ ಪಂಡಿತ್–ಯಶ್ ದಂಪತಿ ಪುತ್ರಿ ಐರಾ, ಗುರುವಾರ ಡಿಸೆಂಬರ್ 2ರಂದು ಮೂರನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.

ಮಗಳ ಹುಟ್ಟುಹಬ್ಬದ ಸಂದರ್ಭದಲ್ಲಿ ರಾಧಿಕಾ ಪಂಡಿತ್ ಅವರು ತಮ್ಮ ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಐರಾ ಕೈ ಹಿಡಿದು ನಡೆದುಕೊಂಡು ಹೋಗುತ್ತಿರುವ ಫೋಟೊ ಒಂದನ್ನು ಪೋಸ್ಟ್ ಮಾಡಿದ್ದಾರೆ.

ನಿನ್ನ ಕೈಯನ್ನು ಹಿಡಿದಿರಲು ನಾನು ಸದಾ ಜತೆಗಿರುತ್ತೇನೆ, ನಮ್ಮ ದೇವತೆಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಹಾರೈಸಿದ್ದಾರೆ.

ಐರಾ ಸಾಮಾಜಿಕ ತಾಣಗಳಲ್ಲಿ ಈಗಾಗಲೇ ಸಂಚಲನ ಸೃಷ್ಟಿಸಿದ್ದಾರೆ.

ಐರಾ ಮಗುವಾಗಿದ್ದ ಸಮಯದಿಂದ ತೊಡಗಿ, ಈಗಲೂ ಯಶ್ ಮತ್ತು ರಾಧಿಕಾ, ಆಕೆಯ ತುಂಟಾಟಗಳ ಫೋಟೊ ಮತ್ತು ವಿಡಿಯೊಗಳನ್ನು ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡುತ್ತಿರುತ್ತಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು