ವಿಷ್ಣುರಂಥ ಸಾಧಕರನ್ನು ನಿಂದಿಸಿ ಹೆಸರು ಮಾಡ ಬಯಸುವವನು ಕಲಾವಿದನಲ್ಲ: ಯಶ್

ಬೆಂಗಳೂರು: ಡಾ. ವಿಷ್ಣುವರ್ಧನ್ ಕುರಿತು ತೆಲುಗು ನಟ ವಿಜಯ್ ರಂಗರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆಗೆ ರಾಕಿಂಗ್ ಸ್ಟಾರ್ ಯಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಸರಿದಾರಿಯಲ್ಲಿ ನಡೆಯುವವರು ಬೆವರು ಹರಿಸಿ ಹಂತಹಂತವಾಗಿ ಬೆಳೆದು ಹೆಸರು ಮಾಡಿ ಉಳಿದುಕೊಳ್ಳುತ್ತಾರೆ, ಅಡ್ಡದಾರಿಯಲ್ಲಿ ನಡೆಯುವವರು ಅಂತ ಹೆಸರುಗಳನ್ನು ಬಳಸಿಕೊಳ್ಳಲು ಹೋಗಿ ಬದಿಯಲ್ಲೇ, ಉಳಿದುಬಿಡುತ್ತಾರೆ. ವಿಷ್ಣು ಸರ್ ಕನ್ನಡ ನಾಡು ಕಂಡ ಮಹಾನ್ ಸಾಧಕರು. ಅವರ ಶ್ರಮ ಪ್ರತಿಭೆ ಹಾಗೂ ನಟನೆಯ ಜೊತೆಜೊತೆಯಾಗಿ ಅವರ ಬದುಕು ಅವರ ವ್ಯಕ್ತಿತ್ವದಿಂದ ನಮ್ಮ ಮನೆ ಮನದಲ್ಲಿ ಅಜರಾಮರವಾಗಿರುವವರು.' ಎಂದು ಹೇಳಿದ್ದಾರೆ.
ತೆಲುಗು ನಟ ವಿಜಯ್ ರಂಗರಾಜು ಈ ಕೂಡಲೇ ಕ್ಷಮೆ ಕೇಳಬೇಕೆಂದು ಒತ್ತಾಯಿಸಿರುವ ಯಶ್, 'ವಿಷ್ಣುವರ್ಧನ್ ಅವರಂತ ಸಾಧಕರನ್ನು ನಿಂದಿಸಿ ಹೆಸರು ಮಾಡ ಬಯಸುವಷ್ಟು ಹೀನ ಮಟ್ಟಕ್ಕೆ ಇಳಿಯುವವನು ಕಲಾವಿದನಲ್ಲ. ಕನ್ನಡ ಚಿತ್ರರಂಗ ಎಲ್ಲಾ ಚಿತ್ರರಂಗಗಳ ಜೊತೆ ಪರಸ್ಪರ ಹೊಂದಾಣಿಕೆ ಹಾಗೂ ಗೌರವವನ್ನು ಕಾಪಾಡಿಕೊಂಡು ಬಂದಿದೆ. ಅದು ಇಂತವರಿಂದ ತಪ್ಪು ದಾರಿಗೆ ಹೋಗಬಾರದು. ಆ ವ್ಯಕ್ತಿ ಕ್ಷಮೆ ಕೇಳಿ ತಮ್ಮ ಅಸಮಂಜಸ ಮಾತುಗಳನ್ನು ಹಿಂಪಡೆಯಬೇಕು' ಎಂದು ಟ್ವೀಟ್ ಮಾಡಿದ್ದಾರೆ.
— Yash (@TheNameIsYash) December 12, 2020
ತೆಲುಗು ನಟ ವಿಜಯ್ ರಂಗರಾಜು ಅವರು ಸಂದರ್ಶನವೊಂದರಲ್ಲಿ ವಿಷ್ಣುವರ್ಧನ್ ಕುರಿತು ವಿವಾದಾತ್ಮಕ ಕೇಳಿಕೆ ನೀಡಿದ್ದಾರೆ. ಈ ಬಗ್ಗೆ ವಿಷ್ಣು ಅಭಿಮಾನಿಗಳು ಸೇರಿದಂತೆ ಕನ್ನಡದ ಪ್ರಮುಖ ನಟರಾದ ಸುದೀಪ್, ಚೇತನ್ ಸೇರಿದಂತೆ ಹಲವು ನಟ-ನಟಿಯರು ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ...
ವಿಷ್ಣು ಇದ್ದಾಗ ಮಾತಾಡಿದ್ದರೆ ಅದರಲ್ಲಿ ಗಂಡಸ್ತನ ಇರುತ್ತಿತ್ತು: ಕಿಚ್ಚ ಕಿಡಿನುಡಿ
ನಾಲಿಗೆಗೆ ಸಭ್ಯತೆ ಅಗತ್ಯ: ವಿಷ್ಣು ಕುರಿತ ವಿಜಯ್ ರಂಗರಾಜ್ ಮಾತಿಗೆ ಚೇತನ್ ಟೀಕೆ
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.