ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕೆಜಿಎಫ್​- ಚಾಪ್ಟರ್​ 2’ ಬಿಡುಗಡೆಗೆ ದಿನಾಂಕ ನಿಗದಿ; 2022 ಏ.14ಕ್ಕೆ ತೆರೆಗೆ

Last Updated 22 ಆಗಸ್ಟ್ 2021, 11:41 IST
ಅಕ್ಷರ ಗಾತ್ರ

ಭಾರತೀಯ ಚಿತ್ರರಂಗ ಕಾತರದಿಂದ ಎದುರು ನೋಡುತ್ತಿರುವ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಿದ್ದು, ಮುಂದಿನ ವರ್ಷ ಚಿತ್ರ ರಿಲೀಸ್ ಆಗಲಿದೆ.

ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎಂಬುದಕ್ಕೆ ಈಗ ಉತ್ತರ ಸಿಕ್ಕಿದ್ದು, 2022ರ ಏಪ್ರಿಲ್ 14ರಂದು ಬಿಡುಗಡೆ ಮಾಡಲು ಚಿತ್ರ ತಂಡ ನಿರ್ಧರಿಸಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾ ಮೂಲಕ ನಟ ಯಶ್, ಚಿತ್ರ ನಿರ್ಮಾಣ ಸಂಸ್ಥೆ 'ಹೊಂಬಾಳೆ ಫಿಲ್ಸ್ಮ್' ಹಾಗೂ ನಿರ್ದೇಶಕ ಪ್ರಶಾಂತ್ ನೀಲ್ ಅವರು ಬಹಿರಂಗಪಡಿಸಿದ್ದಾರೆ.

ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರವು ಈ ವರ್ಷದ ಜುಲೈನಲ್ಲಿಯೇ ಬಿಡುಗಡೆಯಾಗಬೇಕಿತ್ತು. ಆದರೆ ದೇಶದಲ್ಲಿ ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸಿದ್ದರಿಂದಾಗಿ ಬಹುಕೋಟಿ ಬಜೆಟ್‌ನ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು.

'ಇಂದಿನ ಅನಿಶ್ಚಿತತೆಗಳು ನಮ್ಮ ನಿರ್ಧಾರವನ್ನು ವಿಳಂಬಗೊಳಿಸುತ್ತಿವೆ, ಆದರೆ ಭರವಸೆಯಂತೂ ಹಾಗೇ ಇದೆ. ನಾವು 2022ರ ಏಪ್ರಿಲ್ 14 ರಂದು ಚಿತ್ರಮಂದಿರಗಳಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತೇವೆ' ಎಂದು 'ಹೊಂಬಾಳೆ ಫಿಲ್ಮ್ಸ್' ತನ್ನ ಅಧಿಕೃತಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದೆ.

2018ರ ಡಿಸೆಂಬರ್ 21ರಂದು ಬಿಡುಗಡೆಯಾಗಿದ್ದ ಕೆಜಿಎಫ್ ಚಾಪ್ಟರ್ 1 ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿತ್ತು. 250 ಕೋಟಿ ಕ್ಲಬ್ ಸೇರಿದ ಕನ್ನಡದ ಮೊದಲ ಚಿತ್ರ ಎಂಬ ಸಾರ್ವಕಾಲಿಕ ದಾಖಲೆ ಬರೆದಿತ್ತು. ಹೀಗಾಗಿ ಕೆಜಿಎಫ್ 2 ಚಿತ್ರದ ಮೇಲೆ ಅಭಿಮಾನಿಗಳಲ್ಲಿ ನಿರೀಕ್ಷೆಗಳು ಹೆಚ್ಚಾಗಿವೆ.

ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್, ಪ್ರಕಾಶ್ ರಾಜ್, ಮಾಳವಿಕ ಅವಿನಾಶ್, ಶ್ರೀನಿಧಿ ಶೆಟ್ಟಿ ಮತ್ತು ರವೀನಾ ಟಂಡನ್ ಅವರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ಈ ಚಿತ್ರ ಬಿಡುಗಡೆ ಆಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT