ಯಶ್ ನಟನೆಯ ‘ಟಾಕ್ಸಿಕ್’ ಚಿತ್ರ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ ಹೋಗಿದೆ. ‘ಈ ಮೊದಲು ಘೋಷಿಸಿದಂತೆ ಜೂನ್ 4 ರಂದು ಸಿನಿಮಾ ಬಿಡುಗಡೆಯಾಗುವುದಿಲ್ಲ, ಬದಲಾಗಿ ಜಾಗತಿಕ ಮಾರುಕಟ್ಟೆಗೆ ಪೂರಕವಾದ ದಿನಾಂಕದಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ಯಶ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೆವಿಎನ್ ಪ್ರೊಡಕ್ಷನ್ ಹಾಗೂ ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣದ ಸಿನಿಮಾ ಮಾ.19ರಂದು ಬಿಡುಗಡೆಗೊಳ್ಳಬೇಕಿತ್ತು. ಯುದ್ಧದ ಕಾರಣ ನೀಡಿ ಅದನ್ನು ಜೂ.4ಕ್ಕೆ ಮುಂದೂಡಲಾಗಿತ್ತು.

‘ಇತ್ತೀಚೆಗೆ ನಡೆದ ಸಿನಿಮಾಕಾನ್ ಸಮ್ಮೇಳನದಲ್ಲಿ ‘ಟಾಕ್ಸಿಕ್’ ಪ್ರದರ್ಶಿಸಿದಾಗ ಜಾಗತಿಕ ವಿತರಕರು ಮತ್ತು ಚಿತ್ರೋದ್ಯಮದ ಪ್ರಮುಖರಿಂದ ಚಿತ್ರಕ್ಕೆ ದೊರೆತ ಪ್ರತಿಕ್ರಿಯೆಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಲ್ಲಿ ಸಿಕ್ಕ ಪ್ರೋತ್ಸಾಹ ಚಿತ್ರವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಇನ್ನೂ ದೊಡ್ಡಮಟ್ಟದಲ್ಲಿ ಬಿಡುಗಡೆ ಮಾಡಲು ಹೊಸ ಅವಕಾಶಗಳನ್ನು ಕಲ್ಪಿಸಿಕೊಟ್ಟಿದೆ. ಈ ಕಾರಣದಿಂದಾಗಿ ಬಿಡುಗಡೆಯ ಯೋಜನೆಯನ್ನು ಮರುಪರಿಶೀಲಿಸಿ, ಜಾಗತಿಕ ಮಾರುಕಟ್ಟೆಗೆ ಅನುಗುಣವಾಗಿ ಬದಲಾಯಿಸಿಕೊಂಡಿದ್ದೇವೆ’ ಎಂದು ಯಶ್ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.

ಈ ಚಿತ್ರಕ್ಕೆ ಯಶ್ ಮತ್ತು ಗೀತು ಮೋಹನ್ ದಾಸ್ ಕಥೆ ಬರೆದಿದ್ದು, ಗೀತು ಮೋಹನ್ ದಾಸ್ ನಿರ್ದೇಶನವಿದೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರದಲ್ಲಿ ಯಶ್ ಅವರೊಂದಿಗೆ ನಯನತಾರಾ, ಕಿಯಾರಾ ಅಡ್ವಾಣಿ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ನಟಿಸಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಚಿತ್ರೀಕರಿಸಲಾದ ಈ ಚಿತ್ರವು ಹಿಂದಿ, ತಮಿಳು, ತೆಲುಗು ಸೇರಿ ಹಲವು ಭಾಷೆಗಳಿಗೆ ಡಬ್ ಆಗಿದೆ.

ಕೆವಿಎನ್ ಪ್ರೊಡಕ್ಷನ್ ನಿರ್ಮಾಣದಲ್ಲಿ ದಳಪತಿ ವಿಜಯ್ ನಟಿಸಿರುವ ‘ಜನ ನಾಯಗನ್’ ಶೀಘ್ರದಲ್ಲಿ ತೆರೆ ಕಾಣಲಿದ್ದು, ಆ ಕಾರಣಕ್ಕಾಗಿ ‘ಟಾಕ್ಸಿಕ್’ ಮುಂದೂಡಲಾಗಿದೆ ಎಂಬ ಮಾತಿದೆ.

ತಮಿಳಿನ ‘ಜನ ನಾಯಗನ್’ ಚಿತ್ರ ಸಂಕ್ರಾಂತಿಗೆ ತೆರೆ ಕಾಣಬೇಕಿತ್ತು. ಆದರೆ ಸೆನ್ಸಾರ್ ಸಮಸ್ಯೆಯಿಂದಾಗಿ ಬಿಡುಗಡೆಗೊಂಡಿರಲಿಲ್ಲ. ಇದೀಗ ಸೆನ್ಸಾರ್ ಮಂಡಳಿಯಿಂದ ಚಿತ್ರ ಬಿಡುಗಡೆಗೆ ಅನುಮತಿ ಸಿಕ್ಕಿದ್ದು, ಮೇ ಎರಡನೇ ವಾರದಲ್ಲಿ ಚಿತ್ರ ತೆರೆಗೆ ಬರುವ ನಿರೀಕ್ಷೆಯಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260430-51-881881288

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.