ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್ ’ ಸಿನಿಮಾದ ಕುರಿತು ಚಿತ್ರತಂಡ ಅಪ್ಡೇಟ್ ಒಂದನ್ನು ಕೊಟ್ಟಿದೆ. ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಇನ್ನು 100 ದಿನಗಳು ಬಾಕಿ ಉಳಿದಿವೆ. 2026 ಮಾರ್ಚ್ 19ರಂದು ಟಾಕ್ಸಿಕ್ ಸಿನಿಮಾ ಬಿಡುಗಡೆ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿದೆ.
.ಯಶ್ ಅರ್ಜಿ ಮಾನ್ಯ: ಐಟಿ ನೋಟಿಸ್ ರದ್ದು ಮಾಡಿದ ಹೈಕೋರ್ಟ್.ಯಶ್ ನಟನೆಯ ‘ಟಾಕ್ಸಿಕ್’ ಚಿತ್ರದ ವದಂತಿಗಳಿಗೆ ತೆರೆ ಎಳೆದ KVN ಪ್ರೊಡಕ್ಷನ್.
ಇತ್ತೀಚೆಗೆ ಟಾಕ್ಸಿಕ್ ಸಿನಿಮಾ ಬಿಡುಗಡೆ ದಿನಾಂಕ ಬಗ್ಗೆ ವಂದತಿ ಹರಿದಾಡುತ್ತಿತ್ತು. ಆದರೆ ಈಗ ಟಾಕಿಕ್ಸ್ ಸಿನಿಮಾ ಬಿಡುಗಡೆಗೆ ನೂರು ದಿನ ಬಾಕಿ ಉಳಿದಿದೆ ಎಂದು ಚಿತ್ರತಂಡ ಮತ್ತೊಮ್ಮೆ ಅಧಿಕೃತಪಡಿಸಿದೆ. ಯಶ್ ಅವರ ಖಡಕ್ ಲುಕ್ ರಿಲೀಸ್ ಮಾಡುವ ಮುಖಾಂತರ ಟಾಕ್ಸಿಕ್ ಸಿನಿಮಾ ರಿಲೀಸ್ ದಿನಾಂಕವನ್ನು ಕೆವಿಎನ್ ಪ್ರೊಡಕ್ಷನ್ ಮತ್ತೊಮ್ಮೆ ಅಧಿಕೃತವಾಗಿ ಘೋಷಣೆ ಮಾಡಿದೆ.

ಹೊಸ ಪೋಸ್ಟರ್ ಬಿಡುಗಡೆ ಮಾಡಿದ ತಂಡ ಅದರ ಜೊತೆಗೆ ‘100 ದಿನಗಳಲ್ಲಿ ಕಾಲ್ಪನಿಕ ಕಥೆ ತೆರೆದುಕೊಳ್ಳುತ್ತದೆ’ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದೆ. 'ಟಾಕ್ಸಿಕ್' ಚಿತ್ರವನ್ನು ಗೀತು ಮೋಹನ್ದಾಸ್ ನಿರ್ದೇಶನ ಮಾಡಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಹಾಗೂ ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಾಣ ಮಾಡುತ್ತಿದೆ. ವಿಶೇಷ ಏನೆಂದರೆ ಈ ಸಿನಿಮಾದ ಕಥೆ, ಚಿತ್ರಕಥೆ, ಡೈಲಾಗ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬರೆದಿದ್ದಾರೆ.

ಇನ್ನು ಸಿನಿಮಾ ಘೋಷಣೆಯಾದಾಗಲಿಂದಲೂ ಈ ಚಿತ್ರಕ್ಕೆ ಯಾರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮೂಡಿತು. ಟೀಸರ್ನಲ್ಲಿದ್ದ ಮ್ಯೂಸಿಕ್ ಕೇಳಿ ಅಭಿಮಾನಿಗಳು ಫಿದಾ ಆಗಿದ್ದರು. ಆದರೆ ಸಂಗೀತ ನಿರ್ದೇಶಕರು ಯಾರು ಎಂಬುದನ್ನು ಚಿತ್ರತಂಡ ರಿವೀಲ್ ಮಾಡಿರಲಿಲ್ಲ. ಈಗ ಅಧಿಕೃತವಾಗಿ ಸಂಗೀತ ನಿರ್ದೇಶಕರು ಹಾಗೂ ಟಾಕ್ಸಿಕ್ ಚಿತ್ರತಂಡಕ್ಕೆ ಯಾರೆಲ್ಲಾ ಕೆಲಸ ಮಾಡುತ್ತಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದೆ. ಕೆಜಿಎಫ್ ಮಾಂತ್ರಿಕ ರವಿ ಬಸ್ರೂರು ಅವರು ಈ ಸಿನಿಮಾಗೂ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಬಗ್ಗೆ ಚಿತ್ರತಂಡ ಅಧಿಕೃತ ಮಾಹಿತಿ ನೀಡಿದೆ. ಈ ಸಿನಿಮಾ ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಏಕಕಾಲದಲ್ಲಿ ಚಿತ್ರೀಕರಣಗೊಳ್ಳುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.