ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Toxic Movie | ಯಶ್‌ ಅಭಿನಯದ ‘ಟಾಕ್ಸಿಕ್’ ಚಿತ್ರದಲ್ಲಿ ಅಕ್ಷಯ್‌ ಒಬೆರಾಯ್

Published 14 ಆಗಸ್ಟ್ 2024, 6:21 IST
Last Updated 14 ಆಗಸ್ಟ್ 2024, 6:21 IST
ಅಕ್ಷರ ಗಾತ್ರ

ಮುಂಬೈ: ಕೆಜಿಎಫ್ ಖ್ಯಾತಿಯ ನಟ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್‌’ ಚಿತ್ರದಲ್ಲಿ ನಟ ಅಕ್ಷಯ್‌ ಒಬೆರಾಯ್ ಕಾಣಿಸಿಕೊಳ್ಳಲಿದ್ದಾರೆ ಎಂದು ಚಿತ್ರತಂಡ ತಿಳಿಸಿದೆ.

ಈ ಸಂಬಂಧ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಅಕ್ಷಯ್‌ ಒಬೆರಾಯ್ ಪೋಸ್ಟ್‌ ಹಂಚಿಕೊಂಡು ಮಾಹಿತಿ ನೀಡಿದ್ದಾರೆ.

‘ಆತ್ಮೀಯ ಅಕ್ಷಯ್ ಅವರಿಗೆ ಟಾಕ್ಸಿಕ್‌ ಚಿತ್ರತಂಡಕ್ಕೆ ಸ್ವಾಗತ, ಉತ್ತಮ ಚಿತ್ರ ನಿರ್ಮಿಸಲು ನಾವೆಲ್ಲರೂ ಒಟ್ಟಿಗೆ ಶ್ರಮಿಸೋಣ‘ ಎಂದು ಚಿತ್ರತಂಡ ತಿಳಿಸಿದೆ.

ಒಬೆರಾಯ್ ಅವರು ಪಿಜ್ಜಾ, ‘ಫಿತೂರ್’, ‘ಗುರ್ಗಾಂವ್’, ‘ಕಾಳಕಾಂಡಿ’, ‘ಲವ್ ಹಾಸ್ಟೆಲ್’, ‘ಥಾರ್’, ‘ಗ್ಯಾಸ್ಲೈಟ್’ ಚಿತ್ರಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ದಾರೆ. ಇತ್ತೀಚೆಗೆ ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ನಟಿಸಿದ ‘ಫೈಟರ್’ ಚಿತ್ರದಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಈ ಚಿತ್ರಕ್ಕೆ ಗೀತು ಮೋಹನ್‌ ದಾಸ್‌ ಆ್ಯಕ್ಷನ್‌ ಕಟ್‌ ಹೇಳಿತ್ತಿದ್ದು, ಕೆವಿಎನ್ ಪ್ರೊಡಕ್ಷನ್ಸ್ ಚಿತ್ರ ನಿರ್ಮಾಣದ ಜವಾಬ್ದಾರಿ ಹೊತ್ತಿದೆ.

ಇತ್ತೀಚೆಗೆ ಟಾಕ್ಸಿಕ್‌’ ಸಿನಿಮಾದ ಚಿತ್ರೀಕರಣ ಆರಂಭವಾಗಿರುವ ಬಗ್ಗೆ ನಟ ಯಶ್ ಇನ್‌ಸ್ಟಾಗ್ರಾಮ್‌ನಲ್ಲಿ ಮಾಹಿತಿ ನೀಡಿದ್ದರು. ಚಿತ್ರದ ನಾಯಕಿ ಯಾರೆಂಬ ಬಗ್ಗೆ ಚಿತ್ರತಂಡ ಇದುವರೆಗೆ ಮಾಹಿತಿ ಹಂಚಿಕೊಂಡಿಲ್ಲ. ಕಿಯಾರಾ ಅಡ್ವಾಣಿ, ನಯನತಾರಾ ಹೆಸರುಗಳು ಮುನ್ನೆಲೆಗೆ ಬಂದಿವೆಯಾದರೂ ಖಚಿತವಾಗಿಲ್ಲ.

'ಟಾಕ್ಸಿಕ್’ ಮುಂದಿನ ವರ್ಷದ ಏಪ್ರಿಲ್ 10ಕ್ಕೆ ಬಿಡುಗಡೆಯಾಗಲಿದೆ. ಕನ್ನಡ, ಇಂಗ್ಲೀಷ್, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ತೆರೆಕಾಣಲಿದೆ ಎಂದು ಚಿತ್ರತಂಡ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT