ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ಮೇಯರ್ ಭಾಗ್ಯವತಿ ಕಾಂಗ್ರೆಸ್‌ನಿಂದ ಉಚ್ಛಾಟನೆ

Last Updated 25 ಫೆಬ್ರುವರಿ 2018, 8:46 IST
ಅಕ್ಷರ ಗಾತ್ರ

ಮೈಸೂರು: ಪಕ್ಷ ವಿರೋಧಿ ಚಟುವಟಿಕೆಯ ಕಾರಣ ಮೈಸೂರು ಮೇಯರ್‌ ಭಾಗ್ಯವತಿ ಅವರನ್ನು ಕಾಂಗ್ರೆಸ್‌ನಿಂದ ಭಾನುವಾರ ಉಚ್ಛಾಟನೆ ಮಾಡಲಾಗಿದೆ.

ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಅವಧಿಗೆ ಉಚ್ಛಾಟನೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ನಗರ ಘಟಕದ ಅಧ್ಯಕ್ಷ ಆರ್‌.ಮೂರ್ತಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪಾಲಿಕೆ ಸದಸ್ಯತ್ವ ಮತ್ತು ಮೇಯರ್‌ ಸ್ಥಾನದಿಂದ ಅವರನ್ನು ವಜಾ ಮಾಡುವಂತೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದೇವೆ ಎಂದು ಹೇಳಿದರು.

ಮೈಸೂರು ಮಹಾನಗರ ಪಾಲಿಕೆ ಮೇಯರ್‌ ಚುನಾವಣೆ ಜನವರಿ 24 ರಂದು ನಡೆದಿತ್ತು. ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭಾಗ್ಯವತಿ ಅವರು ಜೆಡಿಎಸ್‌ ಮತ್ತು ಬಿಜೆಪಿಯ ಬೆಂಬಲದಿಂದ ಗೆಲುವು ಪಡೆದಿದ್ದರು. ಪಕ್ಷದ ಅಧಿಕೃತ ಅಭ್ಯರ್ಥಿ ಕಮಲಾ ಉದಯ್‌ ಸೋಲು ಅನುಭವಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT