ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಯುವ ಸಿನಿಮಾ ವಿಮರ್ಶಕ, ವಿಡಿಯೊ ಜಾಕಿ ಕೌಶಿಕ್‌ ನಿಧನ

Last Updated 16 ಆಗಸ್ಟ್ 2022, 6:04 IST
ಅಕ್ಷರ ಗಾತ್ರ

ಚೆನ್ನೈ: ತಮಿಳುನಾಡಿನ ಖ್ಯಾತ ಯುವ ವಿಮರ್ಶಕ ಎಲ್‌.ಎಂ ಕೌಶಿಕ್‌ ನಿಧನರಾಗಿದ್ದಾರೆ. ಅವರಿಗೆ 36 ವರ್ಷ ವಯಸ್ಸಾಗಿತ್ತು.

ಸೋಮವಾರ ರಾತ್ರಿ ಅವರು ಹೃದಯಾಘಾತದಿಂದ ನಿಧನರಾದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ. ಕೌಶಿಕ್‌ ನಿಧನಕ್ಕೆ ಕಾಲಿವುಡ್‌, ಟಾಲಿವುಡ್‌ ಸೇರಿದಂತೆ ಮಲಯಾಳಂ ಚಿತ್ರರಂಗದ ಸೆಲೆಬ್ರಿಟಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸಂತಾಪ ಸೂಚಿಸಿದ್ದಾರೆ.

ಕೌಶಿಕ್ ಅವರು ಖಾಸಗಿ ವಾಹಿನಿಯಲ್ಲಿವಿಡಿಯೊ ಜಾಕಿ(ವಿ.ಜೆ) ಆಗಿಯೂ ಕೆಲಸ ಮಾಡುತ್ತಿದ್ದಾರು. ಅವರು ತೆಲುಗು, ತಮಿಳು ಹಾಗೂ ಮಲಯಾಳಂ ಸಿನಿಮಾಗಳ ವಿಮರ್ಶೆ ಮಾಡುತ್ತಿದ್ದರು. ಅವರ ವಿಮರ್ಶೆ ನೋಡಿ ಪ್ರೇಕ್ಷಕರು ಸಿನಿಮಾ ನೋಡಲು ಹೋಗುತ್ತಿದ್ದರು ಎಂದು ತಮಿಳುನಾಡು ಸುದ್ದಿ ಮಾಧ್ಯಮಗಳು ವರದಿ ಮಾಡಿದೆ.

ಮಲಯಾಳಂ ನಟ ದುಲ್ಕರ್ ಸಲ್ಮಾನ್, ನಟಿ ಕೀರ್ತಿ ಸುರೇಶ್, ತೆಲುಗು ನಟ ವಿಜಯ್‌ ದೇವರಕೊಂಡ ಸೇರದಂತೆ ಸಿನಿಮಾ ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT