ಬೆಂಗಳೂರು: ‘ಮಂಗಳ ಗೌರಿ ಮದುವೆ’ ಧಾರಾವಾಹಿ ಮೂಲಕ ಪ್ರೇಕ್ಷಕರ ಮನಗೆದ್ದಿರುವ ನಟಿ ತನಿಷಾ ಕುಪ್ಪಂಡ ಅವರು ‘ಪೆಂಟಗನ್’ ಸಿನಿಮಾದಲ್ಲಿ ನಟಿಸಿದ್ದಾರೆ. ಏ 7ರಂದು ಚಿತ್ರ ಬಿಡುಗಡೆಯಾಗಲಿದ್ದು, ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.
ತನಿಷಾ ಕುಪ್ಪಂಡ ಅವರು ಈ ಚಿತ್ರದಲ್ಲಿ ಬೋಲ್ಡ್ ಲುಕ್‌ನಲ್ಲಿ ಲಿಪ್‌ಲಾಕ್, ಬ್ಯಾಕ್‌ಲೆಸ್ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಐದು ಕತೆಗಳಿರುವ, ಐದು ಮಂದಿ ನಿರ್ದೇಶಕರಿಂದ ಮೂಡಿಬಂದಿರುವ ಈ ಸಿನಿಮಾದ ಮೇಲೆ ಪೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿದೆ.
ಇತ್ತೀಚೆಗೆ ಸಿನಿಮಾದ ಪ್ರಚಾರ ಅಂಗವಾಗಿ ತನಿಷಾ ಅವರು ಯೂಟ್ಯೂಬ್ ಸಂದಶರ್ನವೊಂದರಲ್ಲಿ ಭಾಗವಹಿಸಿದ್ದರು. ಆದರೆ, ಯೂಟ್ಯೂಬರ್‌ರೊಬ್ಬರು, ‘ನೀವು ಬೆತ್ತಲೆ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತೀರಾ’ ಎಂದು ತನಿಷಾ ಅವರನ್ನು ಪ್ರಶ್ನೆ ಕೇಳಿದ್ದಾರೆ.
ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ತನಿಷಾ, ಸಿನಿಮಾದಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡ ಮಾತ್ರಕ್ಕೆ ಬೆತ್ತಲೆ ಸಿನಿಮಾ ಮಾಡೋಕೆ ಆಗುತ್ತಾ? ನಾನು ನೀಲಿಚಿತ್ರ ತಾರೆ ಅಲ್ಲ. ಮಾತನಾಡುವ ಮುನ್ನ ಎಚ್ಚರ ಇರಲಿ. ಕನ್ನಡ ಚಿತ್ರರಂಗದಲ್ಲಿ ಯಾವ ನಟಿಯೂ ನೀಲಿ ಚಿತ್ರಗಳಲ್ಲಿ ಕಾಣಿಸಿಕೊಂಡಿಲ್ಲ’ ಎಂದು ತಿರುಗೇಟು ನೀಡಿದ್ದಾರೆ.
ಹಾಡೊಂದರಲ್ಲಿ ಬೋಲ್ಡ್ ಆಗಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತನಿಷಾ ಅವರನ್ನು ಬೆತ್ತಲೆ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತೀರಾ ಎಂದು ಯೂಟ್ಯೂಬರ್ ಕೇಳಿರುವುದು ಸಾರ್ವಜನಿಕರನ್ನು ಕೆರಳಿಸಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನಟಿ ಸೇರಿದಂತೆ ಅನೇಕರು ಯೂಟ್ಯೂಬರ್‌ನನ್ನು ಹಿಡಿದು ತರಾಟೆಗೆ ತೆಗೆದುಕೊಂಡಿದ್ದಾರೆ.
ಐದು ವಿಭಿನ್ನ ಕಥೆಗಳನ್ನು ಒಳಗೊಂಡ ಈ ಚಿತ್ರದಲ್ಲಿ ಬರುವ 5 ಕಥೆಗಳಿಗೆ ಆಕಾಶ್ ಶ್ರೀವತ್ಸ, ಚಂದ್ರಮೋಹನ್, ರಾಘು ಶಿವಮೊಗ್ಗ, ಕಿರಣ್ ಕುಮಾರ್ ಹಾಗೂ ಗುರು ದೇಶಪಾಂಡೆ ಹೀಗೆ ಐದು ಜನ ನಿರ್ದೇಶಕರು ಆ್ಯಕ್ಷನ್-ಕಟ್ ಹೇಳಿದ್ದಾರೆ.
ಮೈಸೂರು ಪಾಕ್, ಕಾಮಾತುರಾಣಾ ನಭಯಂ, ನಲಜ್ಜ, ದೋಣಿಸಾಗಲಿ, ಮಿಸ್ಟರ್ ಗೋಪಿ ಕೆಫೆ ಸೇರಿ ಐದು ಕಥೆಗಳಿರುವ ಈ ಚಿತ್ರದಲ್ಲಿ ಹಿರಿಯನಟ ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ, ಅನುಷಾ ರೈ, ವಂಶಿಕೃಷ್ಣ, ಅಪೂರ್ವ ಮುಂತಾದವರು ಅಭಿನಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.