ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಲಯಾಳಂ ನಟ, ನಿರ್ದೇಶಕ ಬಾಲಚಂದ್ರ ವಿರುದ್ಧ ಹೇಳಿಕೆ: ಯೂಟ್ಯೂಬರ್‌ಗಳ ವಿರುದ್ಧ FIR

Published : 29 ಸೆಪ್ಟೆಂಬರ್ 2024, 9:56 IST
Last Updated : 29 ಸೆಪ್ಟೆಂಬರ್ 2024, 9:56 IST
ಫಾಲೋ ಮಾಡಿ
Comments

ಕೊಚ್ಚಿ: ಮಲಯಾಳಂ ನಟ ಹಾಗೂ ನಿರ್ದೇಶಕ ಬಾಲಚಂದ್ರ ಮೆನನ್ ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ಪ್ರಸಾರ ಮಾಡಿದ ಆರೋಪದಡಿ ಯೂಟ್ಯೂಬರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮೆನನ್ ಅವರು ಕೊಚ್ಚಿಯ ನಗರ ಪೊಲೀಸ್‌ ಆಯುಕ್ತರಿಗೆ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಕೆಲವು ಯೂಟ್ಯೂಬ್‌ ಚಾನೆಲ್‌ಗಳಲ್ಲಿ 2024ರ ಏಪ್ರಿಲ್‌ 18ರಂದು ನಟಿಯೊಬ್ಬರು ನೀಡಿದ ಸಂದರ್ಶನದಲ್ಲಿ ಮೆನನ್‌ ವಿರುದ್ಧ ಕೆಲವು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು. ‘ಆ ಸಂದರ್ಶನದ ವಿಡಿಯೊವನ್ನು ಸೆಪ್ಟೆಂಬರ್‌ 27ರಂದು ಪುನಃ ಪ್ರಸಾರ ಮಾಡುವ ಮೂಲಕ ಉದ್ದೇಶಪೂರ್ವಕವಾಗಿಯೇ ನನ್ನನ್ನು ಬೆದರಿಸಲು ಮತ್ತು ಮಾನಹಾನಿಗೊಳಿಸಲು ಪ್ರಯತ್ನಿಸಿದ್ದಾರೆ’ ಎಂದು ಐಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಸಂಬಂಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಲಯಾಳ ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಲೈಂಗಿಕ ಶೋಷಣೆ, ತಾರತಮ್ಯ ಮತ್ತು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ನ್ಯಾಯಮೂರ್ತಿ ಹೇಮಾ ಸಮಿತಿಯ ವರದಿ ಇತ್ತೀಚೆಗೆ ಬಿಡುಗಡೆಯಾಗಿತ್ತು. ವರದಿ ಬಹಿರಂಗಗೊಂಡ ಬೆನ್ನಲ್ಲೇ ಕಲಾವಿದರ ಸಂಘಕ್ಕೆ ಅಧ್ಯಕ್ಷ ನಟ ಮೋಹನ್‌ಲಾಲ್‌, ಇತರ ಪದಾಧಿಕಾರಿಗಳು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT