ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಯುವ’ ಚಿತ್ರದ ಎರಡನೇ ಹಾಡು ‘ಅಪ್ಪುಗೆ’ ಬಿಡುಗಡೆ

Published 19 ಮಾರ್ಚ್ 2024, 0:20 IST
Last Updated 19 ಮಾರ್ಚ್ 2024, 0:20 IST
ಅಕ್ಷರ ಗಾತ್ರ

ಯುವ ರಾಜ್‌ಕುಮಾರ್ ಅಭಿನಯದ ಚೊಚ್ಚಲ ಸಿನಿಮಾ ‘ಯುವ’ ಮಾರ್ಚ್‌ 29ರಂದು ಬಿಡುಗಡೆಯಾಗುತ್ತಿದ್ದು, ಮಾರ್ಚ್‌ 23ರಂದು ಹೊಸಪೇಟೆಯಲ್ಲಿ ಚಿತ್ರದ ಪ್ರಿರಿಲೀಸ್‌ ಕಾರ್ಯಕ್ರಮ ನಡೆಯಲಿದೆ ಎಂದಿದೆ ಚಿತ್ರತಂಡ. 

ಇತ್ತೀಚೆಗೆ ಚಿತ್ರದ ಎರಡನೇ ಹಾಡು ‘ಅಪ್ಪುಗೆ’ ಬಿಡುಗಡೆಯಾಗಿದ್ದು, ನಟ ದಿವಂಗತ ಪುನೀತ್‌ ರಾಜ್‌ಕುಮಾರ್ ಅವರ ದ್ವಿತೀಯ ಪುತ್ರಿ ವಂದಿತಾ ಹಾಡನ್ನು ರಿಲೀಸ್‌ ಮಾಡಿದ್ದು ವಿಶೇಷವಾಗಿತ್ತು. ‘ಯುವ, ಕೌಟುಂಬಿಕ ಹಾಗೂ ಆ್ಯಕ್ಷನ್ ಕಥಾಹಂದರ ಹೊಂದಿರುವ ಸಿನಿಮಾ. ತಂದೆ-ಮಗನ ಬಾಂಧವ್ಯದ ಚಿತ್ರವೂ ಹೌದು. ಯಾವ ನಿರೀಕ್ಷೆಯೂ ಇಲ್ಲದೆ ಅಪ್ಪ ಕುಟುಂಬವನ್ನು ಸಲಹುತ್ತಾನೆ. ಅಂತಹ ಅಪ್ಪನ ಗುಣಗಳನ್ನು ವರ್ಣಿಸುವ ಹಾಡು ‘ಅಪ್ಪುಗೆ’. ಹಾಡನ್ನು ನಾನೇ ಬರೆದಿದ್ದೇನೆ. ವಿಜಯ್ ಪ್ರಕಾಶ್ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅಪ್ಪನ ಕುರಿತಾದ ಹಾಡಾಗಿರುವುದರಿಂದ ಈ ಹಾಡನ್ನು ವಂದಿತಾ ಅವರಿಂದ ಬಿಡುಗಡೆ ಮಾಡಿಸಲು ನಿರ್ಧರಿಸಿದೆವು. ಮಾರ್ಚ್ 21ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ’ ಎಂದರು ನಿರ್ದೇಶಕ ಸಂತೋಷ್ ಆನಂದರಾಮ್. 

‘ಚಿತ್ರದ ಕಥೆಗೂ ನನ್ನ ಜೀವನದ ಕಥೆಗೂ ಹಲವು ವಿಷಯಗಳು ಹೋಲುತ್ತವೆ’ ಎಂದು ಮಾತು ಆರಂಭಿಸಿದ ಯುವ ರಾಜ್‌ಕುಮಾರ್, ‘ಅಚ್ಯುತ್‌ ಕುಮಾರ್ ಅವರು ತಂದೆ ಪಾತ್ರ ಮಾಡಿದ್ದಾರೆ‌. ಅವರೊಂದಿಗೆ ಕೆಲವು ಸನ್ನಿವೇಶಗಳಲ್ಲಿ ನಟಿಸುವಾಗ ನನಗೆ ನಮ್ಮ ಅಪ್ಪ ಕಣ್ಣ ಮುಂದೆ ಬರುತ್ತಿದ್ದರು. ಅಂತಹ ಸಂಬಂಧವನ್ನು ಬಣ್ಣಿಸುವ ಈ ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗುತ್ತದೆ’ ಎಂದರು. ಚಿತ್ರವನ್ನು ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT