ಮಂಗಳವಾರ, ಜನವರಿ 26, 2021
25 °C

ಯುವರಾಜ್ ಸ್ವಾಮಿ ವಂಚನೆ ಪ್ರಕರಣ: ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನಾಳೆ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದೆ.

ರಾಜಕಾರಣಿಗಳ ಹೆಸರಿನಲ್ಲಿ ಹಲವರಿಗೆ ವಂಚಿಸಿರುವ ಆರೋಪದ ಮೇರೆಗೆ ಸಿಸಿಬಿ ಬಂಧಿಸಿರುವ ಆರೋಪಿ ಯುವರಾಜ್ (ಸ್ವಾಮಿ) ಖಾತೆಯಿಂದ ರಾಧಿಕಾ ಅವರಿಗೆ ಕೋಟಿಗಟ್ಟಲೆ ಹಣ ವರ್ಗಾವಣೆಗೊಂಡಿರುವ ಆರೋಪ ಸಂಬಂಧ ನಿನ್ನೆಯಷ್ಟೇ ರಾಧಿಕಾ ಸುದ್ದಿಗೋಷ್ಠಿ ನಡೆಸಿದ್ದರು.

‘ಯುವರಾಜ್ ತಮ್ಮ ಕುಟುಂಬಕ್ಕೆ 17 ವರ್ಷದಿಂದ ಪರಿಚಯವಿದ್ದರು. ಐತಿಹಾಸಿಕ ಸಿನಿಮಾವೊಂದಕ್ಕೆ ಮುಂಗಡವಾಗಿ ₹15 ಲಕ್ಷ ಹಾಕಿದ್ದರು. ನಿರ್ಮಾಪಕರೊಬ್ಬರಿಂದ ₹60 ಲಕ್ಷ ಹಾಕಿಸಿದ್ದರು. ಇದನ್ನು ಹೊರತುಪಡಿಸಿ ಅವರೊಂದಿಗೆ ರಾಜಕೀಯ ವ್ಯವಹಾರಗಳು ನಡೆದಿಲ್ಲ’ ಎಂದು ಸ್ಪಷ್ಟನೆ ನೀಡಿದ್ದರು.

ರಾಧಿಕಾ ಸಹೋದರ ರವಿರಾಜ್‌ ಸಹ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದರು.

ಇದನ್ನೂ ಓದಿ... ಐತಿಹಾಸಿಕ ಸಿನಿಮಾಗಾಗಿ ಒಟ್ಟು ₹75 ಲಕ್ಷ ಬಂದಿದೆ: ರಾಧಿಕಾ ಕುಮಾರಸ್ವಾಮಿ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು