ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮೀರ್ ಪುತ್ರ‌ ಜೈದ್ ಖಾನ್ ಮುಖ್ಯ ಭೂಮಿಕೆಯ 'ಬನಾರಸ್' ಚಿತ್ರೀಕರಣ ಪೂರ್ಣ

Last Updated 12 ಡಿಸೆಂಬರ್ 2020, 8:45 IST
ಅಕ್ಷರ ಗಾತ್ರ

ಶಾಸಕ ಜಮೀರ್ ಅಹಮದ್ ಖಾನ್ ಪುತ್ರ‌ ಜೈದ್ ಖಾನ್ ಮತ್ತು ಕರಾವಳಿ ಬೆಡಗಿ ಸೋನಲ್‌ ಮೊಂತೆರೊ ಮುಖ್ಯ ಭೂಮಿಕೆಯಲ್ಲಿರುವ ‘ಬನಾರಸ್‌’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರೀಕರಣೋತ್ತರ ಕೆಲಸಗಳನ್ನು ಚಿತ್ರತಂಡ ಕೈಗೆತ್ತಿಕೊಂಡಿದೆ.

ಬಸವನಗುಡಿಯ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಸಾಂಕೇತಿಕವಾಗಿ ಚಿತ್ರದ ಚಿತ್ರೀಕರಣ ಪೂರ್ಣಗೊಳಿಸಿ, ಕುಂಬಳಕಾಯಿ ಒಡೆಯಲಾಯಿತು.

ಕನ್ನಡ ಚಿತ್ರರಂಗದಲ್ಲಿ ಸದಭಿರುಚಿ ಚಿತ್ರಗಳ ನಿರ್ದೇಶನಕ್ಕೆ ಹೆಸಾರಾಗಿರುವ ಜಯತೀರ್ಥ ಬನಾರಸ್ ಚಿತ್ರ ನಿರ್ದೇಶಿಸಿದ್ದಾರೆ.

ಜೈದ್ ಖಾನ್ ಈ‌ ಚಿತ್ರದ‌ ಮೂಲಕ ನಾಯಕರಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ. ಸೋನಲ್ ಮೊಂತೆರೊ ಚಿತ್ರದ ನಾಯಕಿ.

ವಿಭಿನ್ನ ಪ್ರೇಮಕಥೆಯ ಹೊಂದಿರುವ ಈ ಚಿತ್ರದ ಬಹುತೇಕ ಚಿತ್ರೀಕರಣ ಕಾಶಿಯಲ್ಲಿ ನಡೆದಿದೆ.‌‌ ಕಾಶಿಗೂ ಚಿತ್ರದ ಕಥೆಗೂ ಸಂಬಂಧವಿದೆ ಹಾಗಾಗಿ ಅಲ್ಲೇ ಹಿಚ್ಚಿನ‌ ಭಾಗ ಚಿತ್ರೀಕರಣ ನಡೆಸಲಾಗಿದೆ. ಕಾಶಿಯ ಪರಂಪರೆ, ಸಂಸ್ಕೃತಿ ಹಾಗೂ ಅಲ್ಲಿನ ಪಾತ್ರಗಳನ್ನು ಬನಾರಸ್ ಚಿತ್ರದಲ್ಲಿ ಕಣ್ತುಂಬಿಕೊಳ್ಳಬಹುದು. ಉಳಿದಂತೆ ಬೆಂಗಳೂರು, ಮೈಸೂರು, ಗೋವಾದಲ್ಲೂ ಚಿತ್ರೀಕರಣವಾಗಿದೆ ಎನ್ನುತ್ತಾರೆ ನಿರ್ದೇಶಕ ಜಯತೀರ್ಥ.

ತಾರಾಗಣದಲ್ಲಿ ದೇವರಾಜ್, ಅಚ್ಯುತ‌ಕುಮಾರ್, ಸುಜಯ್ ಶಾಸ್ತ್ರಿ, ಸ್ವಪ್ನ ರಾಜ್, ಬರ್ಕತ್ ಆಲಿ, ಚಿರಂತ್, ರೋಹಿತ್ ಇದ್ದಾರೆ.
ಹಾಡುಗಳಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಅದ್ವೈತ ಗುರುಮೂರ್ತಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಹರ್ಷ ನೃತ್ಯ ನಿರ್ದೇಶನ ಹಾಗೂ ವಿಜಯ್ ಮಾಸ್ಟರ್, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ರಶ್ಮಿ ವಸ್ತ್ರವಿನ್ಯಾಸ ಮಾಡಿದ್ದಾರೆ.

ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಿಲಕ್ ರಾಜ್ ಬಲ್ಲಾಳ್ ನಿರ್ಮಿಸಿರುವ ಈ ಚಿತ್ರಕ್ಕೆ ಮುಜಮ್ಲಿಲ್‌ ಅಹಮದ್ ಖಾನ್ ಅವರ ಸಹ ನಿರ್ಮಾಣವಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT