ಮುಂಬೈ: ಬಾಲಿವುಡ್ನ ಖ್ಯಾತ ಯುವ ನಟ ರಣಬೀರ್ ಕಪೂರ್ ಅವರು ಲಂಡನ್ನಲ್ಲಿ ನೆಲೆಸಿರುವ ಭಾರತೀಯ ಮೂಲದ ಉದ್ಯಮಿಯೊಬ್ಬರ ಮಗಳನ್ನು ವಿವಾಹವಾಗಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಹರಡಿದೆ.
ಇತ್ತೀಚೆಗೆ ರಣಬೀರ್ ಕಪೂರ್ ಅವರು ತಾಯಿ ನೀತೂ ಕಪೂರ್ ಜತೆ ಲಂಡನ್ಗೆ ಭೇಟಿ ನೀಡಿದ್ದರು. ಈ ವೇಳೆ ಮದುವೆಯ ಬಗ್ಗೆ ಆ ಉದ್ಯಮಿ ಜತೆ ಮಾತುಕತೆ ನಡೆಸಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ವರದಿ ಮಾಡಿದೆ.
ಲಂಡನ್ನಲ್ಲಿ ನೆಲೆಸಿರುವ ಆ ಭಾರತೀಯ ಉದ್ಯಮಿ ಯಾರು ಎಂಬುದು ತಿಳಿದುಬಂದಿಲ್ಲ. ಎಲ್ಲವೂ ಅಂದುಕೊಂಡಂತೆ ನಡೆದರೆ ಈ ವರ್ಷಾಂತ್ಯದಲ್ಲಿ ವಿವಾಹ ನಡೆಯುವ ಸಾಧ್ಯತೆಗಳಿವೆ.