ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈರಲ್‌ ಆಯ್ತು ಸಮಂತಾ ‘ದೊಣ್ಣೆ ವರಸೆ’ ವಿಡಿಯೊ

Last Updated 22 ಏಪ್ರಿಲ್ 2017, 6:19 IST
ಅಕ್ಷರ ಗಾತ್ರ

ಚೆನ್ನೈ: ಟಾಲಿವುಡ್‌ ನಟಿ ಸಮಂತಾ ದೊಣ್ಣೆ ವರಸೆ (ಸಿಲಂಬಮ್‌) ಅಭ್ಯಾಸ ಮಾಡುತ್ತಿರುವ ವಿಡಿಯೊ ಈಗ ವೈರಲ್‌ ಆಗಿದೆ.

ಜಿಮ್‌ನಲ್ಲಿ ದೊಣ್ಣೆ ವರಸೆ ಅಭ್ಯಾಸ ಮಾಡುತ್ತಿರುವ ವಿಡಿಯೊವನ್ನು ಎರಡು ದಿನಗಳ ಹಿಂದೆ ಸಮಂತಾ ತಮ್ಮ ಇನ್‌ಸ್ಟಾಗ್ರಾಮ್‌ ಅಕೌಂಟ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಇನ್‌ಸ್ಟಾಗ್ರಾಮ್‌ ಈವರೆಗೆ 7 ಲಕ್ಷಕ್ಕೂ ಹೆಚ್ಚು ಮಂದಿ ಈ ವಿಡಿಯೊ ವೀಕ್ಷಿಸಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಮಾತ್ರವಲ್ಲದೆ ವಾಟ್ಸ್‌ಆ್ಯಪ್‌, ಯೂಟ್ಯೂಬ್‌, ಫೇಸ್‌ಬುಕ್‌, ಟ್ವಿಟರ್‌ನಲ್ಲೂ ಈ ವಿಡಿಯೊ ಹರಿದಾಡುತ್ತಿದೆ.

ತಮ್ಮ ನೆಚ್ಚಿನ ನಟಿಯ ನಟನೆ, ನೃತ್ಯವನ್ನಷ್ಟೇ ಕಂಡಿದ್ದ ಸಮಂತಾ ಅಭಿಮಾನಿಗಳು ಈ ಹೊಸ ‘ವರಸೆ’ ಕಂಡು ಹುಬ್ಬೇರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT