ದುಲ್ಕರ್ ಸಲ್ಮಾನ್ ನಟನೆಯ ಲಕ್ಕಿ ಭಾಸ್ಕರ್ ಚಿತ್ರ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ. ಮಧ್ಯಮ ಕುಟುಂಬದ, ಬ್ಯಾಂಕ್ ಉದ್ಯೋಗಿಯಾಗಿ ದುಲ್ಕರ್ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರ ನೆಟ್‌ಫ್ಲಿಕ್ಸ್‌ನಲ್ಲಿ 5.1 ಮಿಲಿಯನ್‌ಗೂ ಹೆಚ್ಚು ಜನರು ವೀಕ್ಷಿಸಿದ್ದು, ಅತಿ ಹೆಚ್ಚು ವೀಕ್ಷಣೆ ಪಡೆದ ಚಿತ್ರಗಳ ಪಟ್ಟಿಗೆ ಸೇರಿದೆ. ತಮಿಳು, ಮಲಯಾಳಂ, ಕನ್ನಡ, ಹಿಂದಿ, ತೆಲುಗಿನಲ್ಲಿ ಈ ಚಿತ್ರ ನೋಡಬಹುದು.