ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇಸ್ಲಾಂ ಧರ್ಮ ಪಾಲನೆಗಾಗಿ ಮಾಡೆಲಿಂಗ್ ಕ್ಷೇತ್ರ ತೊರೆದ ಭೋಜ್‌ಪುರಿ ನಟಿ

ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ಸಾಹರ್ ಅಫ್ಶಾ ಘೋಷಣೆ
Last Updated 10 ಅಕ್ಟೋಬರ್ 2022, 11:00 IST
ಅಕ್ಷರ ಗಾತ್ರ

ಬೆಂಗಳೂರು: ಧಾರ್ಮಿಕ ಕ್ಷೇತ್ರದಲ್ಲಿ ಹೆಚ್ಚು ತೊಡಗಿಸಿಕೊಳ್ಳುವುದು ಮತ್ತು ಅಲ್ಲಾಹುವಿನ ಸೇವೆಯಲ್ಲಿ ಮುಂದುವರಿಯುವ ಉದ್ದೇಶದಿಂದ ಸಿನಿಮಾ ಮತ್ತು ಮಾಡೆಲಿಂಗ್ ಕ್ಷೇತ್ರವನ್ನು ತೊರೆಯುತ್ತಿದ್ದೇನೆ ಎಂದು ಭೋಜ್‌ಪುರಿ ನಟಿ ಸಾಹರ್ ಅಫ್ಶಾ ಘೋಷಿಸಿದ್ದಾರೆ.

ಈ ಕುರಿತು ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಹರ್ ಮಾಡೆಲಿಂಗ್ ಹಾಗೂ ಸಿನಿಮಾ ಕ್ಷೇತ್ರದಲ್ಲಿ ಜನಪ್ರಿಯತೆ ಗಳಿಸಿದ್ದರು. ಭೋಜ್‌ಪುರಿ ಮನರಂಜನಾ ಕ್ಷೇತ್ರದಲ್ಲಿ ಅಪಾರ ಅಭಿಮಾನಿಗಳನ್ನು ಗಳಿಸಿದ್ದರು.

ಆದರೆ ಮುಂದೆ ಯಾವುದೇ ಮಾಡೆಲಿಂಗ್ ಮತ್ತು ನಟನೆಯಲ್ಲಿ ತೊಡಗಿಸಿಕೊಳ್ಳುವುದಿಲ್ಲ. ಅಲ್ಲಾಹುವಿನ ಆಶೀರ್ವಾದವನ್ನು ಪಡೆಯಲು ನಾನು ಇಸ್ಲಾಮಿನ ಬೋಧನೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಇಸ್ಲಾಮ್ ಧರ್ಮದ ಆಶಯವನ್ನು ಪಾಲಿಸುತ್ತೇನೆ. ಅಶಕ್ತರ ಸೇವೆಯಲ್ಲಿ ತೊಡಗಿಸಿಕೊಳ್ಳುತ್ತೇನೆ. ಆ ಮೂಲಕ ಅಲ್ಲಾಹುವಿನ ಕೃಪೆಗೆ ಪಾತ್ರಳಾಗುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT