ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖ್ಯಾತ ಫ್ಯಾಷನ್ ಡಿಸೈನರ್‌ ಪ್ರತ್ಯುಶಾ ಅನುಮಾನಾಸ್ಪದ ಸಾವು

Last Updated 12 ಜೂನ್ 2022, 7:27 IST
ಅಕ್ಷರ ಗಾತ್ರ

ಹೈದರಾಬಾದ್‌: ದೇಶದ ಟಾಪ್ಫ್ಯಾಷನ್ ಡಿಸೈನರ್‌ಗಳಲ್ಲಿ ಒಬ್ಬರಾಗಿದ್ದ ಪ್ರತ್ಯುಶಾ ಗರಿಮೆಲ್ಲಾ ಇಲ್ಲಿನಬಂಜಾರಾ ಹಿಲ್ಸ್‌ನಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಭಾನುವಾರ ಬೆಳಗ್ಗೆ ಈ ವಿಷಯ ಬೆಳಕಿಗೆ ಬಂದಿದೆ. ಅನುಮಾನಾಸ್ಪದ ಸಾವು ಪ್ರಕರಣದಡಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಪ್ರತ್ಯುಶಾಕಾರ್ಬನ್ ಮೊನಾಕ್ಸೈಡ್‌ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪ್ರತ್ಯಶಾ ಮೃತ ದೇಹ ದೊರೆತ ಬೆಡ್‌ರೂಮಿನಲ್ಲಿ ಕಾರ್ಬನ್ ಮೊನಾಕ್ಸೈಡ್‌ ಸೋರಿಕೆಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರತ್ಯುಶಾಚಿತ್ರರಂಗದ ಸೆಲೆಬ್ರಿಟಿಗಳಿಗೆ ಫ್ಯಾಷನ್ ಡಿಸೈನರ್ ಆಗಿ ಕೆಲಸ ಮಾಡುತ್ತಿದ್ದರು. ದೇಶದ ಟಾಪ್30ಫ್ಯಾಷನ್ ಡಿಸೈನರ್‌ಗಳಲ್ಲಿ ಇವರು ಕೂಡ ಒಬ್ಬರಾಗಿದ್ದರು. ಘಟನೆ ಬಗ್ಗೆ ಬಂಜಾರಾ ಹಿಲ್ಸ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT