ಸ್ಯಾಂಡಲ್ವುಡ್ ನಟ ಧನ್ವೀರ್ ಅಭಿನಯದ ಕ್ರೈಮ್–ಥ್ರಿಲ್ಲರ್ ಸಿನಿಮಾ ‘ಹಯಗ್ರೀವ’ ಒಟಿಟಿಯಲ್ಲಿ ಬಿಡುಗಡೆಯಾಗಿದೆ.

ಮೆಡಿಕಲ್ ಮಾಫಿಯಾದ ಸುತ್ತ ಸಾಗುವ ಕಥೆಯು, ಹಲವು ರೋಚಕ ತಿರುವುಗಳಿಂದ ಕೂಡಿದೆ. ರಹಸ್ಯವಾಗಿ ನಡೆಯುವ ಕೊಲೆಗಳನ್ನು ಪತ್ತೆ ಹಚ್ಚುವ ಪೊಲೀಸ್ ಅಧಿಕಾರಿಯಾಗಿ ನಟ ಧನ್ವೀರ್ ಕಾಣಿಸಿಕೊಂಡಿದ್ದಾರೆ. ಸಂಜನಾ ಆನಂದ್ ಅವರು ನಾಯಕಿಯಾಗಿ ನಟಿಸಿದ್ದಾರೆ.

ರಂಗಾಯಣ ರಘು, ತಾರಾ, ಸಾಧು ಕೋಕಿಲಾ, ಶರತ್ ಲೋಹಿತಾಶ್ವ, ರಮೇಶ್ ಭಟ್, ಅಶ್ವಿನಿ ಗೌಡ , ಗಿಲ್ಲಿ, ರವಿಶಂಕರ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ರಘುಕುಮಾರ್ ಒ.ಆರ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಜೂಡಾ ಸ್ಯಾಂಡಿ ಅವರ ಸಂಗೀತ ನಿರ್ದೇಶನವಿದೆ.

ಫೆ.27ರಂದು ಬಿಡುಗಡೆಯಾಗಿದ್ದ ಚಿತ್ರವು ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿತ್ತು. ಈಗ ಈ ಸಿನಿಮಾವು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. 2 ಗಂಟೆ 28 ನಿಮಿಷ ಅವಧಿಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.