ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಧಿಕಾ ಪಂಡಿತ್ ಜತೆ ವಿದೇಶ ಪ್ರವಾಸದಲ್ಲಿ ಕೆಜಿಎಫ್ ಸ್ಟಾರ್ ಯಶ್

ಅಕ್ಷರ ಗಾತ್ರ

ಬೆಂಗಳೂರು: ಕೆಜಿಎಫ್ ಚಿತ್ರದ ಯಶಸ್ಸಿನ ಬಳಿಕ ಯಶ್ ಗೋವಾ ಪ್ರವಾಸಕ್ಕೆ ಹೋಗಿ ಬಂದಿದ್ದರು. ಈ ಬಾರಿ ಪತ್ನಿ ರಾಧಿಕಾ ಪಂಡಿತ್ ಜತೆ ವಿದೇಶ ಪ್ರವಾಸಕ್ಕೆ ಹೋಗಿ, ಅಲ್ಲಿ ಸುಂದರ ಕ್ಷಣಗಳನ್ನು ಕಳೆದಿದ್ದಾರೆ.

ನಟಿ ಮತ್ತು ಯಶ್ ಪತ್ನಿ ರಾಧಿಕಾ ಪಂಡಿತ್ ಅವರು ವಿದೇಶ ಪ್ರವಾಸದ ಸುಂದರ ಕ್ಷಣಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ಪತ್ನಿ ಜತೆ ವಿದೇಶ ಪ್ರವಾಸ, ಶಾಪಿಂಗ್‌ನ ಕ್ಷಣಗಳನ್ನು ನಟ ಯಶ್ ಕೂಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ಸ್ಟೈಲಿಶ್ ಜೋಡಿ ಎಂದೇ ಕರೆಸಿಕೊಳ್ಳುವ ಯಶ್ ಮತ್ತು ರಾಧಿಕಾ, ಪ್ರವಾಸಿ ತಾಣದಲ್ಲಿ ವಿವಿಧ ಪೋಸ್ ನೀಡುವ ಮೂಲಕ ಫೋಟೊ ತೆಗೆಸಿಕೊಂಡಿದ್ದಾರೆ.

2016ರಲ್ಲಿ ಯಶ್ ಮತ್ತು ರಾಧಿಕಾ ಮದುವೆಯಾಗಿದ್ದು, ಅವರಿಗೆ ಐರಾ ಮತ್ತು ಯಥರ್ವ್‌ ಎಂಬ ಇಬ್ಬರು ಮಕ್ಕಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT