ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮ ಕ್ಷೇತ್ರಕ್ಕೆ ಕಾಲಿರಿಸಿದ ನಟಿ ನಯನತಾರಾ

Last Updated 16 ಡಿಸೆಂಬರ್ 2021, 6:10 IST
ಅಕ್ಷರ ಗಾತ್ರ

ಬೆಂಗಳೂರು: ನಟಿ ನಯನತಾರಾ ಅವರು ಉದ್ಯಮ ಕ್ಷೇತ್ರಕ್ಕೆ ಕಾಲಿರಿಸಿದ್ದಾರೆ.

ಈಗಾಗಲೇ ಬಾಲಿವುಡ್ ನಟಿಯರಾದ ಕತ್ರೀನಾ ಕೈಫ್, ಆಲಿಯಾ ಭಟ್ ಸಿನಿಮಾ ರಂಗದ ಜತೆಗೇ ಉದ್ಯಮದಲ್ಲೂ ಛಾಪು ಮೂಡಿಸಿದ್ದಾರೆ.

ನಯನತಾರಾ ಕೂಡ ಅದೇ ಹಾದಿಯಲ್ಲಿ ಸಾಗಿದ್ದು, ಚರ್ಮರೋಗ ತಜ್ಞರ ಸಹಯೋಗದಲ್ಲಿ ಉದ್ಯಮ ಆರಂಭಿಸುತ್ತಿದ್ದಾರೆ.

ಲಿಪ್‌ಸ್ಟಿಕ್‌ಗಳು ನಯನತಾರಾ ಅವರ ಕಂಪನಿಯ ಪ್ರಮುಖ ಉತ್ಪನ್ನಗಳಾಗಿರಲಿವೆ. ವಿವಿಧ ರೀತಿಯ ಆಯ್ಕೆಗಳು ಒಂದೇ ಬ್ರ್ಯಾಂಡ್ ಅಡಿಯಲ್ಲಿ ದೊರೆಯುವಂತೆ ಮಾಡುವುದು ಅವರ ಉದ್ದೇಶವಾಗಿದೆ..

ಕಡಿಮೆ ಬೆಲೆಗೆ ಉತ್ತಮ ಉತ್ಪನ್ನ ಒದಗಿಸುವುದು ಮತ್ತು ಗುಣಮಟ್ಟ ಹಾಗೂ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ಇರುವುದಾಗಿ ನಯನತಾರಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT