ಸ್ಯಾಂಡಲ್ವುಡ್ ಸ್ಟಾರ್ ನಟ ವಿಜಯ್ ರಾಘವೇಂದ್ರ ಅವರ ಬಹು ನಿರೀಕ್ಷಿತ ಸಿನಿಮಾ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಒಟಿಟಿಗೆ ಲಗ್ಗೆಯಿಟ್ಟಿದೆ.

ಕ್ರೈಮ್ ಥ್ರಿಲ್ಲರ್ ಸಿನಿಮಾ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’, ಏ.17ರಿಂದ ಅಮೆಜಾನ್ ಪ್ರೈಮ್ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆಗುತ್ತಿದೆ. ಈ ಚಿತ್ರವು 2021ರಲ್ಲಿ ತೆರೆಕಂಡ ಸೀತಾರಾಮ್ ಬಿನೋಯ್ ಕೇಸ್ ನಂ.18 ಸಿನಿಮಾದ ಸಿಕ್ವೆಲ್ ಆಗಿದೆ.

ದೇವಿಪ್ರಸಾದ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶಿಸಿದ್ದಾರೆ. ವಿಜಯ ರಾಘವೇಂದ್ರ, ಗೋಪಾಲಕೃಷ್ಣ ದೇಶಪಾಂಡೆ, ಉಷಾ ಭಂಡಾರಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಗೆ ಹೇಮಂತ್ ಆಚಾರ್ ಛಾಯಾಚಿತ್ರಗ್ರಹಣ, ನವನೀತ್ ಶ್ಯಾಮ್ ಸಂಗೀತ ನಿರ್ದೇಶನ, ಶಶಾಂಕ್ ನಾರಾಯಣ್ ಸಂಕಲನ, ಭವಾನಿ ಶಂಕರ್ ಕಲಾ ನಿರ್ದೇಶನವಿದೆ.

ಈ ಚಿತ್ರವು ಫೆ.20ರಂದು ಬಿಡುಗಡೆಯಾಗಿತ್ತು. ಆದರೆ, ಒಳ್ಳೆಯ ವಿಮರ್ಶೆಗಳ ನಡುವೆಯೂ ಚಿತ್ರವು ನಿರೀಕ್ಷಿತ ಪ್ರದರ್ಶನ ಕಂಡಿರಲಿಲ್ಲ.

ಇದೀಗ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಸಿನಿಮಾವನ್ನು ಪ್ರೈಮ್ನಲ್ಲಿ ಕನ್ನಡ, ತಮಿಳು, ತೆಲುಗು, ಮಲಯಾಳ ಮತ್ತು ಹಿಂದಿ ಭಾಷೆಯಲ್ಲಿ ವೀಕ್ಷಿಸಬಹುದಾಗಿದೆ. ಚಿತ್ರವು 120 ನಿಮಿಷಗಳ ಅವಧಿಯಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.