ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬ್ರೇಕಪ್ ವದಂತಿ: ಕಾರ್ಯಕ್ರಮಕ್ಕೆ ಜತೆಯಾಗಿ ಬಂದ ಶಮಿತಾ ಶೆಟ್ಟಿ, ರಾಕೇಶ್ ಬಾಪಟ್

Published : 14 ಮಾರ್ಚ್ 2022, 6:27 IST
ಫಾಲೋ ಮಾಡಿ
Comments

ಬೆಂಗಳೂರು: ಬಾಲಿವುಡ್ ನಟಿ ಶಮಿತಾ ಶೆಟ್ಟಿ ಮತ್ತು ರಾಕೇಶ್ ಬಾಪಟ್ ಜೋಡಿ ಬೇರೆ ಬೇರೆಯಾಗುತ್ತಿದ್ದಾರೆ ಎನ್ನುವ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಹಲವು ಸಂದೇಶಗಳು ಹರಿದಾಡಿದ್ದವು. ಆದರೆ ಅವೆಲ್ಲವೂ ಸುಳ್ಳು ಎಂದು ಈ ಜೋಡಿ ನಿರೂಪಿಸಿದ್ದಾರೆ.

ಭಾನುವಾರ ರಾತ್ರಿ ಮುಂಬೈನಲ್ಲಿ ನಡೆದ ಸಿನಿಮಾ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಶಮಿತಾ ಮತ್ತು ರಾಕೇಶ್ ಜತೆಯಾಗಿಯೇ ಆಗಮಿಸಿ, ಬ್ರೇಕ್‌ಅಪ್ ವದಂತಿಯನ್ನು ತಳ್ಳಿಹಾಕಿದ್ದಾರೆ.

ಬಿಗ್ ಬಾಸ್ ಒಟಿಟಿ ವೇದಿಕೆಯ ಮೂಲಕ ಶಮಿತಾ ಮತ್ತು ರಾಕೇಶ್ ಜೋಡಿ ಜನಪ್ರಿಯತೆ ಗಳಿಸಿದ್ದರು.

ಇವರನ್ನು ಅಭಿಮಾನಿಗಳು ‘ಶರಾ‘ ಎಂದೇ ಕರೆಯುತ್ತಾರೆ. ಆದರೆ ಇತ್ತೀಚೆಗೆ ಇವರ ನಡುವೆ ವಿರಸ ಮೂಡಿದ್ದು, ಬೇರೆಬೇರೆಯಾಗುತ್ತಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT