ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಲ್ಡೀವ್ಸ್ ಬೀಚ್‌ನಲ್ಲಿ ಐಸ್ ಕ್ರೀಮ್‌ ಮಾರಾಟ ಮಾಡಲು ಹೊರಟ ತಮನ್ನಾ

Last Updated 20 ಮಾರ್ಚ್ 2022, 7:43 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಿವುಡ್ ಜತೆಗೇ, ದಕ್ಷಿಣ ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ನಟಿ ತಮನ್ನಾ ಭಾಟಿಯಾ, ಪ್ರವಾಸದ ಚಿತ್ರಗಳನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮಾಲ್ಡೀವ್ಸ್ ಬೀಚ್‌ಗೆ ಪ್ರವಾಸ ತೆರಳಿದ್ದ ಸಂದರ್ಭ ತಮನ್ನಾ, ಐಸ್ ಕ್ರೀಮ್ ಮಾರಾಟ ಮಾಡುವ ಬೈಸಿಕಲ್‌ನಲ್ಲಿ ಕುಳಿತುಕೊಂಡು ಫೋಟೊಗೆ ಪೋಸ್‌ ನೀಡಿದ್ದಾರೆ.

ಬೇಸಿಗೆಯ ಬಿಸಿಲಿನ ಧಗೆಗೆ ಜನರು ತಂಪು ಪಾನೀಯಗಳ ಮೊರೆ ಹೋಗಿರುವ ಸಂದರ್ಭದಲ್ಲಿ ತಮನ್ನಾ, ಐಸ್ ಕ್ರೀಮ್ ಮಾರಾಟ ಮಾಡುವ ಮೂಲಕ ಅಭಿಮಾನಿಗಳನ್ನು ರಂಜಿಸಲು ಹೊರಟಿದ್ದಾರೆ.

ಇತ್ತೀಚೆಗಷ್ಟೇ ಬಾಲಿವುಡ್ ಸೆಲೆಬ್ರಿಟಿ ನೃತ್ಯ ನಿರ್ದೇಶಕ, ಸಂಗೀತ ಸಂಯೋಜಕ ಬಾದ್‌ ಶಾ ಜತೆಗೆ ಆಲ್ಬಂ ಹಾಡಿನಲ್ಲಿ ತಮನ್ನಾ ಹೆಜ್ಜೆ ಹಾಕಿದ್ದರು.

ಕಡಲ ತೀರದ ಸುಂದರ ಸಂಜೆಯಲ್ಲಿ ಇರುವ ತಮನ್ನಾ ಚಿತ್ರಕ್ಕೆ ಅಭಿಮಾನಿಗಳು ಲೈಕ್ ಮತ್ತು ಕಾಮೆಂಟ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT