ಶ್ರೀನಿಧಿ ಬೆಂಗಳೂರು ನಿರ್ದೇಶನದ, ನಾಗಭೂಷಣ್ ಮುಖ್ಯಭೂಮಿಕೆಯಲ್ಲಿರುವ ‘ಜೆರಾಕ್ಸ್’ ವೆಬ್ಸರಣಿ ಏ.24ರಿಂದ ಜೀ5ನಲ್ಲಿ ಸ್ಟ್ರೀಮ್ ಆಗಲಿದೆ. ಇತ್ತೀಚೆಗೆ ಇದರ ಟ್ರೇಲರ್ ಬಿಡುಗಡೆಯಾಗಿದೆ.

ಆರು ಸಂಚಿಕೆಗಳನ್ನು ಒಳಗೊಂಡ ಈ ಸರಣಿಯನ್ನು ಡಾಲಿ ಧನಂಜಯ ಅವರು ತಮ್ಮ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣ ಮಾಡಿದ್ದಾರೆ. ‘ಮಳವಳ್ಳಿಯ ರಾಯದುರ್ಗದ ಪ್ರಕಾಶ (ನಾಗಭೂಷಣ್) ಜೆರಾಕ್ಸ್ ಅಂಗಡಿಯಲ್ಲಿ ಕೆಲಸಗಾರನಾಗಿರುತ್ತಾನೆ. ಅವನ ಜೆರಾಕ್ಸ್ ಯಂತ್ರಕ್ಕೆ ಒಂದು ಶಕ್ತಿಯುತ ತಾಯತ ತಾಗಿದಾಗ ಅವನ ಜೀವನ ಬದಲಾಗುತ್ತದೆ. ಅವನು ತೆಗೆಯುವ ಜೆರಾಕ್ಸ್ ಪ್ರತಿಗಳಿಗೆ ಜೀವ ಬರುತ್ತದೆ. ಇದರಿಂದ ಆಗುವ ಬದಲಾವಣೆಗಳು, ಊರಿನಲ್ಲಾಗುವ ಘಟನೆಗಳೇ ಸರಣಿಯ ಕಥೆ’ ಎಂದಿದೆ ತಂಡ.

ಪಾಯಲ್ ಚೆಂಗಪ್ಪ, ಮಂಜು ಪಾವಗಡ, ಓಂ ಪ್ರಕಾಶ್ ರಾವ್, ಶ್ರೀವತ್ಸ, ಯಶವಂತ್ ಶೆಟ್ಟಿ, ವಿಜಯ್ ಪ್ರಸಾದ್, ತುಕಾಲಿ ಸಂತು, ಜಗ್ಗಪ್ಪ, ಸಿದ್ದು ಮಂಡ್ಯ, ಸುಧಾಕರ್ ಗೌಡ ಮುಂತಾದವರು ಸರಣಿಯಲ್ಲಿ ನಟಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-51-188639661

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.