ಶುಕ್ರವಾರ, ಸೆಪ್ಟೆಂಬರ್ 25, 2020
28 °C

ನನಗಾದ ಅನ್ಯಾಯದ ಬಗ್ಗೆ ರಾಜ್ಯಪಾಲರಿಗೆ ತಿಳಿಸಿದ್ದೇನೆ: ನಟಿ ಕಂಗನಾ ರನೌತ್‌

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಂಬೈ: ನಟಿ ಕಂಗನಾ ರನೌತ್ ಅವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಮುಂಬೈನಲ್ಲಿರುವ ರಾಜಭವನದಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.

ರಾಜ್ಯಪಾಲರ ಭೇಟಿ ಬಳಿಕ ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ಕಂಗನಾ, 'ನಾನು ರಾಜ್ಯಪಾಲ ಕೋಶಿಯಾರಿ ಅವರನ್ನು ಭೇಟಿಯಾಗಿ ನನಗಾದ ಅನ್ಯಾಯದ ಬಗ್ಗೆ ಹೇಳಿದ್ದೇನೆ. ನನಗೆ ನ್ಯಾಯ ದೊರೆಯಲಿದೆ. ಆ ಮೂಲಕ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆಯನ್ನು ವ್ಯವಸ್ಥೆಯಲ್ಲಿ ಮರಳಿ ಸ್ಥಾಪಿಸಿದಂತಾಗುತ್ತದೆ ಎಂದು ನಾನು ಭಾವಿಸುತ್ತೇನೆ. ರಾಜ್ಯಪಾಲರು ತಮ್ಮ ಮಗಳಂತೆ ನನ್ನ ಮಾತುಗಳನ್ನು ಕೇಳಿಸಿಕೊಂಡರು. ಅದು ನನ್ನ ಅದೃಷ್ಟ' ಎಂದು ತಿಳಿಸಿದ್ದಾರೆ. 

ಶಿವಸೇನಾ ನಾಯಕರನ್ನು ಏಕವಚನದಲ್ಲಿ ಟೀಕಿಸಿದ್ದ ಹಿನ್ನೆಲೆಯಲ್ಲಿ ಮುಂಬೈನಲ್ಲಿರುವ ಕಂಗನಾ ಕಚೇರಿಯ ಕೆಲಭಾಗಗಳನ್ನು ಮಹಾನಗರ ಪಾಲಿಕೆಯು ನೆಲಸಮಗೊಳಿಸಿದೆ ಎಂಬ ಆರೋಪ ಕೇಳಿಬಂದಿತ್ತು. ಆ ನಂತರ ಕಂಗನಾ ಅವರು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು ಮತ್ತು ಮುಂಬೈಯನ್ನು ಪಾಕಿಸ್ತಾನಕ್ಕೆ ಹೋಲಿಸಿ ಟ್ವೀಟ್‌ ಮಾಡಿದ್ದರು. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು