ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗರ್ಭಿಣಿಯಾದ ಬಳಿಕ ಮೊದಲ ಫೋಟೊ ಪೋಸ್ಟ್ ಮಾಡಿದ ಕಾಜಲ್ ಅಗರ್‌ವಾಲ್

Last Updated 4 ಜನವರಿ 2022, 3:17 IST
ಅಕ್ಷರ ಗಾತ್ರ

ಬೆಂಗಳೂರು: ಬಹುಭಾಷಾ ನಟಿ ಕಾಜಲ್ ಅಗರ್‌ವಾಲ್ ಅವರು ಗರ್ಭಿಣಿಯಾಗಿದ್ದಾರೆ. ಕಾಜಲ್ ಗರ್ಭಿಣಿಯಾಗಿರುವ ವಿಚಾರವನ್ನು ಅವರ ಪತಿ ಗೌತಮ್, ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೊ ಪೋಸ್ಟ್ ಮಾಡಿ ಹಾರೈಸುವ ಮೂಲಕ ಹಂಚಿಕೊಂಡಿದ್ದರು.

ಅದಾದ ಬೆನ್ನಲ್ಲೇ, ಕಾಜಲ್ ಅವರು ಪತಿ ಗೌತಮ್ ಜತೆಗಿನ ಫೋಟೊ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಮಾಡಿರುವ ಪೋಸ್ಟ್‌ನಲ್ಲಿ ಕಾಜಲ್ ಅವರು ಗರ್ಭಿಣಿಯಾಗಿರುವುದು ಸ್ಪಷ್ಟವಾಗಿ ಕಾಣಿಸಿದೆ. ಈ ಮೂಲಕ ಸ್ವತಃ ಕಾಜಲ್ ಅವರೇ, ಅಧಿಕೃತವಾಗಿ ಸುದ್ದಿಯನ್ನು ದೃಢಪಡಿಸಿದ್ದಾರೆ.

ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪೋಸ್ಟ್‌
ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಪೋಸ್ಟ್‌

ನಟಿ ಕಾಜಲ್ ಗರ್ಭಿಣಿಯಾಗಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಸಾಮಾಜಿಕ ತಾಣಗಳಲ್ಲಿ ಹರಿದಾಡಿತ್ತು.

ಅಲ್ಲದೆ, ಕಾಜಲ್ ಅವರು ಸಾರ್ವಜನಿಕವಾಗಿ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಜತೆಗೆ ಹೊಸ ಸಿನಿಮಾಗಳನ್ನು ಕೂಡ ಒಪ್ಪಿಕೊಂಡಿರಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT