RRR: ಸಿನಿಮಾ ಬಿಡುಗಡೆ ಬೆನ್ನಲ್ಲೇ ರಾಜಮೌಳಿಯನ್ನು ಅನ್‌ಫಾಲೋ ಮಾಡಿದ ಆಲಿಯಾ ಭಟ್

ಬೆಂಗಳೂರು: ಬಾಲಿವುಡ್ ನಟಿ ಆಲಿಯಾ ಭಟ್, ಎಸ್. ಎಸ್. ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್ ಸಿನಿಮಾದಲ್ಲಿ ಪಾತ್ರ ಮಾಡಿರುವುದು ಎಲ್ಲರಿಗೂ ಗೊತ್ತೇ ಇದೆ.
ಆದರೆ, ಸಿನಿಮಾದಲ್ಲಿ ಅವರ ಪಾತ್ರಕ್ಕೆ ಅಷ್ಟೇನೂ ಮಹತ್ವವಿಲ್ಲ. ಅಲ್ಲದೆ, ಕೆಲವೇ ಕ್ಷಣಗಳ ಕಾಲ ಮಾತ್ರ ಆಲಿಯಾ ತೆರೆಯ ಮೇಲೆ ಕಾಣಿಸುತ್ತಾರೆ. ಹೀಗಾಗಿ ಅವರಿಗೆ ನಿರ್ದೇಶಕರ ಮೇಲೆ ಅಸಮಾಧಾನವಿದೆ ಎನ್ನಲಾಗಿದೆ.
ಆರ್‌ಆರ್‌ಆರ್ ಸಿನಿಮಾ ಬಿಡುಗಡೆಯಾದ ಬೆನ್ನಲ್ಲೇ, ಆಲಿಯಾ ಅವರು ರಾಜಮೌಳಿಯವರನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಅನ್‌ಫಾಲೋ ಮಾಡಿದ್ದಾರೆ. ಅಲ್ಲದೆ, ಆರ್‌ಆರ್‌ಆರ್ ಸಿನಿಮಾಗೆ ಸಂಬಂಧಿಸಿದ ಪೋಸ್ಟ್‌ಗಳನ್ನು ಕೂಡ ಡಿಲೀಟ್ ಮಾಡಿದ್ದಾರೆ.
ಪ್ರಭಾಸ್ ಜತೆ ಹೊಂದಾಣಿಕೆಯಿಲ್ಲ: ಪೂಜಾ ಹೆಗ್ಡೆ ಸ್ಪಷ್ಟನೆ
ಆರ್‌ಆರ್‌ಆರ್ ಚಿತ್ರದ ಆರಂಭದ ಪ್ರಚಾರ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದ ಆಲಿಯಾ, ನಂತರದ ದಿನಗಳಲ್ಲಿ ಅಷ್ಟೇನೂ ಆಸಕ್ತಿ ವಹಿಸಿಲ್ಲ. ಚಿತ್ರದಲ್ಲಿನ ಪಾತ್ರ ನಿರ್ವಹಣೆ ಬಗ್ಗೆ ತಮ್ಮ ಅಸಮಾಧಾನವನ್ನು ಆಲಿಯಾ ಈ ರೀತಿಯಾಗಿ ವ್ಯಕ್ತಪಡಿಸಿದ್ದಾರೆ ಎನ್ನುವ ಮಾತು ಬಾಲಿವುಡ್‌ನಲ್ಲಿ ಕೇಳಿಬಂದಿದೆ.
ಏಪ್ರಿಲ್ನಲ್ಲಿ ರಣಬೀರ್ ಕಪೂರ್–ಆಲಿಯಾ ಭಟ್ ಮದುವೆ?
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.